Download Our App

Follow us

Home » ರಾಜಕೀಯ » ರಾಜ್ಯ ಕಾಂಗ್ರೆಸ್​ನಲ್ಲಿ ಮತ್ತೆ ಭಾರೀ ಬಿರುಗಾಳಿ – ಫಾರಿನ್​ನಲ್ಲಿ ಡಿಸಿಎಂ..ಆಪ್ತರ ಜೊತೆ ಸಿಎಂ..!

ರಾಜ್ಯ ಕಾಂಗ್ರೆಸ್​ನಲ್ಲಿ ಮತ್ತೆ ಭಾರೀ ಬಿರುಗಾಳಿ – ಫಾರಿನ್​ನಲ್ಲಿ ಡಿಸಿಎಂ..ಆಪ್ತರ ಜೊತೆ ಸಿಎಂ..!

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸ ಕೈಗೊಂಡಿರುವ ಸಮಯದಲ್ಲೇ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೇರಿದಂತೆ 35 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.

ಹೈಕಮಾಂಡ್​ನಿಂದ KPCC ಬದಲಾವಣೆ ಮೆಸೇಜ್ ಬಂದ ಬೆನ್ನಲ್ಲೇ, ನ್ಯೂ ಇಯರ್ ಡಿನ್ನರ್ ನೆಪದಲ್ಲಿ ನಿನ್ನೆ ರಾತ್ರಿ ಭಾರೀ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಬಣದ 7 ಸಚಿವರು ಈ ಕೂಟದಲ್ಲಿ ಭಾಗಿಯಾಗಿದ್ದರು. ಸಿಎಂ ಉಪಸ್ಥಿತಿಯಲ್ಲಿ ನಡೆದಿರುವ ಮೀಟಿಂಗ್​ನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆಯಿದೆ.

ಮೆಗಾ ಮೀಟಿಂಗ್​ನಲ್ಲಿ ಡಾ. ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ, ಡಾ ಹೆಚ್​ ಸಿ ಮಹದೇವಪ್ಪ, ಒಟ್ಟು 7 ಸಚಿವರು 35 ಶಾಸಕರು ಪಾಲ್ಗೊಂಡಿದ್ದರು. ಸಿದ್ದು ಬಣದಿಂದ ಇದೇ ಮೊದಲ ಬಾರಿ ಇಷ್ಟು ದೊಡ್ಡ ಮೀಟಿಂಗ್ ನಡೆದಿದ್ದು, ಇದು ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ : ಎಲಿಮಿನೇಷನ್‌ನಲ್ಲಿ ಬಿಗ್​ ಟ್ವಿಸ್ಟ್ – ಈ ವಾರ ಬಿಗ್​ಬಾಸ್‌ ಮನೆಯಿಂದ ಆಚೆ ಬರೋದ್ಯಾರು?

Leave a Comment

DG Ad

RELATED LATEST NEWS

Top Headlines

ಬೆಳ್ಳಂಬೆಳಗ್ಗೆ ನೇಪಾಳದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಬಿಹಾರ, ದೆಹಲಿ, ಪಂಜಾಬ್​ನಲ್ಲೂ ನಡುಗಿದ ಭೂಮಿ..!

ದೆಹಲಿ : ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 7.1ರಷ್ಟು ದಾಖಲಾಗಿದೆ. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದ್ದು, ಬಿಹಾರ,

Live Cricket

Add Your Heading Text Here