Download Our App

Follow us

Home » ಸಿನಿಮಾ » ಅಲ್ಲು ಅರ್ಜುನ್​ಗೆ ಬಿಗ್​ ರಿಲೀಫ್ – ಸಂಧ್ಯಾ ಥಿಯೇಟರ್ ಕಾಲ್ತುಳಿತ ಕೇಸಲ್ಲಿ ರೆಗ್ಯುಲರ್ ಬೇಲ್!

ಅಲ್ಲು ಅರ್ಜುನ್​ಗೆ ಬಿಗ್​ ರಿಲೀಫ್ – ಸಂಧ್ಯಾ ಥಿಯೇಟರ್ ಕಾಲ್ತುಳಿತ ಕೇಸಲ್ಲಿ ರೆಗ್ಯುಲರ್ ಬೇಲ್!

ಹೈದರಾಬಾದ್ : ಸಂಧ್ಯಾ ಥಿಯೇಟರ್​​ನಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ಸ್ಟೈಲಿಶ್ ಸ್ಟಾರ್​ ಅಲ್ಲು ಅರ್ಜುನ್​ಗೆ ಬಿಗ್ ರಿಲೀಫ್ ಸಿಕ್ಕಿದೆ. ಘಟನೆ ಸಂಬಂಧ ಈಗಾಗಲೇ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್​ಗೆ ರೆಗ್ಯುಲರ್ ಬೇಲ್ ನೀಡಿದೆ.

ಡಿಸೆಂಬರ್ 04 ರಂದು ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಬಂಧಿಸಿದ್ದರು.

ಅಲ್ಲು ಅರ್ಜುನ್ ಬಂಧನವಾದ ದಿನವೇ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆಯಲಾಗಿತ್ತು. ಅಂತೆಯೇ ನಾಂಪಲ್ಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಹ ಹಾಕಲಾಗಿತ್ತು. ಈ ಹಿಂದೆಯೂ ಒಮ್ಮೆ ಜಾಮೀನು ವಿಚಾರಣೆ ನಡೆದಿದ್ದು, ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಇಂದು ಆದೇಶ ಹೊರಬಿದ್ದಿದ್ದು ಪ್ರಕರಣದಲ್ಲಿ ಅಲ್ಲು ಅರ್ಜುನ್​ಗೆ ಜಾಮೀನು ದೊರೆತಿದೆ.ಅಲ್ಲು ಅರ್ಜುನ್​ಗೆ ಈಗ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ನೀಡಿರುವ ನಾಂಪಲ್ಲಿ ನ್ಯಾಯಾಲಯ, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಮತ್ತು ಇಬ್ಬರು ವ್ಯಕ್ತಿಗಳ ಶೂರಿಟಿ ಕೇಳಿದೆ. ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಭಂಧ ವಿಧಿಸಿಲ್ಲ ಎನ್ನಲಾಗುತ್ತಿದೆ. ಜಾಮೀನು ದೊರೆತಿರುವ ಕಾರಣ ನಿರಾಳರಾಗಿರುವ ಅಲ್ಲು ಅರ್ಜುನ್, ಮುಂದಿನ ಹೆಜ್ಜೆಯಾಗಿ ತಮ್ಮ ಮೇಲಿನ ಪ್ರಕರಣ ರದ್ದು ಪಡಿಸಲು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಇದೇ ಪ್ರಕರಣದಲ್ಲಿ ‘ಪುಷ್ಪ 2’ ಸಿನಿಮಾದ ನಿರ್ಮಾಪಕರ ಮೇಲೂ ಎಫ್​ಐಆರ್ ದಾಖಲಾಗಿತ್ತು. ಆದರೆ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದ ಮೈತ್ರಿ ಮೂವಿ ಮೇಕರ್ಸ್ ತಮ್ಮ ಮೇಲೆ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಮನವಿ ಮಾಡಿದ್ದರು. ಆದೇಶ ನೀಡಿದ ಹೈಕೋರ್ಟ್, ನಿರ್ಮಾಪಕರನ್ನು ಬಂಧಿಸದಂತೆ ಪೊಲೀಸರಿಗೆ ಸೂಚಿಸಿರುವ ಜೊತೆಗೆ ಆರೋಪಿಗಳನ್ನು ಸರಿಯಾಗಿ ಹೆಸರಿಸಿ ಮತ್ತೊಮ್ಮೆ ಪಿಟಿಷನ್ ಸಲ್ಲಿಸುವಂತೆ ಸೂಚಿಸಿದೆ.

ದನ್ನೂ ಓದಿ : ಕಳ್ಳತನಕ್ಕೆ ಬಂದು ಮಹಿಳೆ ಜೊತೆ ಅಸಭ್ಯ ವರ್ತನೆ – ಕಂಬಕ್ಕೆ ಕಟ್ಟಿ ಯುವಕನಿಗೆ ಗ್ರಾಮಸ್ಥರ ಗೂಸಾ..!

Leave a Comment

DG Ad

RELATED LATEST NEWS

Top Headlines

ಸಿಎಂ ಸಮ್ಮುಖದಲ್ಲೇ ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲರು – ಕೊನೆಗೂ ದಶಕಗಳ ಹೋರಾಟ ಅಂತ್ಯ.. 6 ಮಂದಿ ಮುಖ್ಯವಾಹಿನಿಗೆ!

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಶರಣಾಗಿದ್ದಾರೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ಧರಾಮಯ್ಯನವರ ಮುಂದೆಯೇ ನಕ್ಸಲರು

Live Cricket

Add Your Heading Text Here