Download Our App

Follow us

Home » ಸಿನಿಮಾ » ಮದುವೆ ಸಂಭ್ರಮದಲ್ಲಿ ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ಕೊಡಿಸಿದ ನಟ ಡಾಲಿ ಧನಂಜಯ್​..!

ಮದುವೆ ಸಂಭ್ರಮದಲ್ಲಿ ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ಕೊಡಿಸಿದ ನಟ ಡಾಲಿ ಧನಂಜಯ್​..!

ಸಾಮಾನ್ಯವಾಗಿ ಮದುವೆ ಅಂದ ತಕ್ಷಣ ಮನೆ ಸರಿ ಮಾಡಿಸೋದು, ಮನೆಗೆ ಸುಣ್ಣ ಬಣ್ಣ ಮಾಡಿಸೋದು ಸರ್ವೇ ಸಾಮಾನ್ಯ. ಆದರೆ ನಟ ಡಾಲಿ ಮಾತ್ರ ಈ ವಿಚಾರದಲ್ಲಿ ಸಖತ್‌ ಡಿಫ್ರೆಂಟ್‌. ಮದುವೆ ಫಿಕ್ಸ್‌ ಆಯ್ತು ಡೇಟ್‌ ಕೂಡ ಕನ್ಫರ್ಮ್‌ ಆಯ್ತು ಇನ್ನೊಂದು ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಹೊತ್ತಲ್ಲಿ ತಾನು ಬೆಳೆದು ಬಂದ ತನ್ನೂರಿಗೆ ಮಾಡಬೇಕಾದ ಸೇವೆಯನ್ನ ಮಾತ್ರ ಮರೆತಿಲ್ಲ ಡಾಲಿ ಧನಂಜಯ್.

ಕನ್ನಡ ಸಿನಿಮಾರಂಗದ ಕಲಾವಿದರ ಸಾಲಿನಲ್ಲಿ ವಿಶೇಷವಾಗಿ ನಿಲ್ಲುವ ನಟ ಡಾಲಿ ಧನಂಜಯ್. ಈಗಿನ ಕಾಲದಲ್ಲಿ ಹುಟ್ಟೂರಿನಿಂದ ಎಲ್ಲಾ ಗೌರವ ಪಡೆದವರು ಅದೇ ಊರಿಗೆ ಬೇಕಾದನ್ನ ಮಾಡಲು ಮನಸ್ಸು ಮಾಡೋದಿಲ್ಲ. ಆದರೆ ನಟ ಡಾಲಿ ತಾವು ಹುಟ್ಟಿದ ಊರಿನ ಶಾಲೆಯಲ್ಲಿ ಓದದೇ ಇದ್ದರೂ ತವರೂರಿನ ಶಾಲೆಗೆ ಹೊಸ ರೂಪ ನೀಡುತ್ತಿದ್ದಾರೆ. ಅದು ತಮ್ಮ ಮದುವೆ ಸಂದರ್ಭದಲ್ಲಿ ಅನ್ನೋದು ವಿಶೇಷ.

ಫೆಬ್ರವರಿ 1 6ರಂದು ನಟ ಡಾಲಿ ಧನಂಜಯ್ ಡಾಕ್ಟರ್‌ ಧನ್ಯತಾ ಜೊತೆಯಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ಮದುವೆ ತಯಾರಿ ಶುರುವಾಗಿದೆ. ರಾಜಕೀಯ ಗಣ್ಯರು, ಮಠಾಧೀಶರಿಗೆ ಮದುವೆ ಆಹ್ವಾನ ಪತ್ರಿಕೆ ನೀಡುತ್ತಿರುವ ಡಾಲಿ, ಈ ಮಧ್ಯೆ ತಮ್ಮ ಊರಿನ ಸರ್ಕಾರಿ ಶಾಲೆಗೆ ಹೊಸ ರೂಪ ನೀಡುವ ಸಂಕಲ್ಪ ಮಾಡಿದ್ದಾರೆ. ತಮ್ಮ ಮದುವೆಯ ಸಂದರ್ಭವನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಮಾದರಿ ಆಗುವ ಕೆಲಸವನ್ನು ಡಾಲಿ ಧನಂಜಯ್ ಮಾಡುತ್ತಿದ್ದಾರೆ.

ತಮ್ಮ ಊರಾದ ಕಾಳೇನಹಳ್ಳಿಯಲ್ಲಿ 1-7ನೇ ತರಗತಿವರೆಗಿನ ಸರ್ಕಾರಿ ಪ್ರಾಥಮಿಕ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿದ್ದಾರೆ. ಈ ಶಾಲೆಯಲ್ಲಿ ಹಾಲಿ 80 ಮಕ್ಕಳಿದ್ದಾರೆ. ತಮ್ಮ ಮದುವೆಯನ್ನು ಅರ್ಥಪೂರ್ಣಗೊಳಿಸಲು ಇಡೀ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಡಾಲಿ ಮುಂದಾಗಿದ್ದಾರೆ. ಇಡೀ ಶಾಲೆಯ ನೆಲಕ್ಕೆ ಟೈಲ್ಸ್, ಬಣ್ಣ ಮಾಸಿದ ಶಾಲೆಯ ಎಲ್ಲ ಗೋಡೆಗಳಿಗೆ ಸಂಪೂರ್ಣ, ಬಿರುಕು ಬಿಟ್ಟಿದ್ದ ಗೋಡೆ, ಅಂತಸ್ತಿಗೆ ಚುರತಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿಗೆ ಹೊಸ ರೂಪ, ಶೌಚಾಲಯಕ್ಕೆ ಸುಸ್ಥಿತಿ, ಅಚ್ಚುಕಟ್ಟು ಅಡುಗೆ ಮನೆ, ಕುಡಿಯುವ ನೀರಿನ ವ್ಯವಸ್ಥೆ ಹೀಗೆ ತನ್ನೂರಿನ ಶಾಲೆಗೆ ಹೈಟೆಕ್ ಸ್ಪರ್ಶ ನೀಡುತ್ತಿದ್ದಾರೆ.

ತಾವು ಈ ಶಾಲೆಯಲ್ಲಿ ಓದದೇ ಇದ್ದರೂ ಕೂಡ ತಮ್ಮೂರಿನ ಶಾಲೆ ಚೆನ್ನಾಗಿರಬೇಕು ಹಾಗೂ ಮಕ್ಕಳು ಉತ್ತಮ ವಾತಾವರಣದಲ್ಲಿ ಕಲಿಯಬೇಕು ಅನ್ನೋದು ಡಾಲಿ ಧನಂಜಯ್ ಅವರ ಉದ್ದೇಶವಾಗಿದೆ. ಧನಂಜಯ್​ ಅವರ ಈ ಕೆಲಸಕ್ಕೆ ಊರಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳು ಖರ್ಚಾಗುತ್ತಿದ್ದು, ನಟ ಡಾಲಿ ಹಣದ ಬಗ್ಗೆ ತಲೆ ಕೆಡಿಸಿಕೊಳ್ಳದೇ ಶಾಲೆ ಬೇಕಿರೋ ಎಲ್ಲಾ ರೀತಿಯ ವ್ಯವಸ್ಥೆ ಮಾಡಿ ಎಂದಿದ್ದಾರೆ. ತನ್ನೂರಿ ಶಾಲೆ ಚೆನ್ನಾಗಿರಬೇಕು ಹಾಜರಾತಿ ಹೆಚ್ಚಾಗಬೇಕು ಸರ್ಕಾರಿ ಶಾಲೆಗಳು ಉಳಿಯಬೇಕು ಅನ್ನೋದಷ್ಟೇ ಇದರ ಉದ್ದೇಶ ಎಂದಿದ್ದಾರೆ.

ಇದನ್ನೂ ಓದಿ : ಕರ್ನಾಟಕದ ನಯಾ ಕ್ರಶ್ ಆಗೋದ್ರಾ ದಿವ್ಯಾ ಗೌಡ? – ಬಿಗ್​​ಬಾಸ್ ಸ್ಪರ್ಧಿ​​ ​ಭವ್ಯಾ ಅಕ್ಕನ ಅಸಲಿ ವಯಸ್ಸೆಷ್ಟು?

Leave a Comment

DG Ad

RELATED LATEST NEWS

Top Headlines

ಇಬ್ರಾಹಿಂ ಅಲಿ ಖಾನ್ ಜೊತೆ ಶ್ರೀಲೀಲಾ ಮಿಂಚಿಂಗ್​​ – ಬಾಲಿವುಡ್‌ಗೆ ಹಾರಿದ್ರಾ ಕನ್ನಡದ ಚೆಲುವೆ ?

ಮುಂಬೈ : ಕನ್ನಡದ ನಟಿ ಶ್ರೀಲೀಲಾ ಅವರು ಸೂಪರ್​ ಹಿಟ್​ ‘ಪುಷ್ಪ 2’ ಚಿತ್ರದಲ್ಲಿ ಕಿಸ್ಸಿಕ್ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗೆ ಪಾದಾರ್ಪಣೆ

Live Cricket

Add Your Heading Text Here