Download Our App

Follow us

Home » ಕ್ರೀಡೆ » ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮುಂಬೈ: ಟಿಂ ಇಂಡಿಯಾದ ಆಲ್​​ರೌಂಡರ್​ ಹಾರ್ದಿಕ್ ಪಾಂಡ್ಯಾ ಡಿವೋರ್ಸ್​ ಬೆನ್ನಲ್ಲೇ ಇದೀಗ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದೆ.  ಭಾರತದ ತಂಡದ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಪರಸ್ಪರ ಬೇರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಭಾರತ ಕ್ರಿಕೆಟ್ ತಂಡದ ಲೆಗ್​ ಸ್ಪಿನ್ನರ್ ಯುಜುವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ಇನ್‌ಸ್ಟಾಗ್ರಾಂನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದು, ಸ್ಟಾರ್ ಜೋಡಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ವದಂತಿಗಳು ಹಬ್ಬುತ್ತಿವೆ.

ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಇನ್ಸ್‌ಟಾಗ್ರಾಂನಿಂದ ಡಿಲೀಟ್ ಮಾಡಿದ್ದಾರೆ. ಸದ್ಯ ಧನಶ್ರೀ ಅವರು ಪತಿ ಚಹಲ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಆದರೆ ಪತಿಯೊಂದಿಗಿನ ಯಾವುದೇ ಫೋಟೋಗಳನ್ನು ಡಿಲೀಟ್ ಮಾಡಿಲ್ಲ. ಇಬ್ಬರೂ ಪ್ರತ್ಯೇಕವಾಗಲು ನಿರ್ಧರಿಸಿದ್ದು, ಸದ್ಯದಲ್ಲೇ ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

2023ರಲ್ಲಿ ಧನಶ್ರೀ ಇನ್‌ಸ್ಟಾಗ್ರಾಂ ಯೂಸರ್ ನೇಮ್‌ನಿಂದ ‘ಚಹಲ್’ ಅನ್ನು ಕೈಬಿಟ್ಟ ನಂತರ ವಿಚ್ಛೇದನ ವದಂತಿಗಳು ಹಬ್ಬಿದ್ದವು. ಆದರೆ ಈ ವದಂತಿಯನ್ನು ಯುಜುವೇಂದ್ರ ಚಹಲ್ ನಿರಾಕರಿಸಿದ್ದರು. ಸದ್ಯ ಹಬ್ಬುತ್ತಿರುವ ವಿಚ್ಛೇದನದ ವದಂತಿಗಳು ನಿಜವೆಂದು ಹೇಳಲಾಗುತ್ತಿದೆ.

ಪ್ರತ್ಯೇಕವಾಗಲು ನಿಖರವಾದ ಕಾರಣಗಳು ಇನ್ನೂ ಬಹಿರಂಗಗೊಂಡಿಲ್ಲ. ಕಳೆದ ಮೂರು ತಿಂಗಳಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದಾರೆ.  ಇದೀಗ ಇಬ್ಬರೂ ಪರಸ್ಪರ ಅನ್ ಫಾಲೋ ಮಾಡಿಕೊಳ್ಳುವ ಮೂಲಕ ಈ ಊಹಾಪೋಹಗಳು ಮತ್ತಷ್ಟು ಸುದ್ದಿಗೆ ಗ್ರಾಸವಾಗುವಂತೆ ಮಾಡಿದ್ದಾರೆ.

ಮುಂಬೈನ ದಂತವೈದ್ಯೆ ಹಾಗೂ ಕೊರಿಯೋಗ್ರಾಫರ್ ಆಗಿದ್ದ, ಧನಶ್ರೀ ಅವರ ಬಳಿ ಯುಜ್ವೇಂದ್ರ ಚಾಹಲ್ ಡ್ಯಾನ್ಸ್ ಕಲಿಯಲು ಹೋಗುತ್ತಿದ್ದರು. ಹೀಗಾಗಿ ಇವರಿಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಕೊರೋನಾ ಮಹಾಮಾರಿ ಲಾಕ್‌ಡೌನ್‌ ಸಮಯದಲ್ಲಿ ಪರಸ್ಪರ ಪರಿಚಯವಾಗಿದ್ದ ಚಹಲ್ ಮತ್ತು ಧನಶ್ರೀ ಅವರು 2020ರ ಡಿಸೆಂಬರ್ 11ರಂದು ವಿವಾಹವಾಗಿದ್ದರು. ಇದೀಗ ಡಿವೋರ್ಸ್​ ಸುದ್ದಿ ಭಾರೀ ಸದ್ದು ಮಾಡುತ್ತಿದೆ.

ಇದನ್ನೂ ಓದಿ : ಶಾಲೆ ಮುಗಿಸಿ ಮನೆಗೆ ಮರಳುವಾಗ ದುರಂತ – ಸೆಂಟ್ರಿಂಗ್ ಮರ ಬಿದ್ದು ಬಾಲಕಿ ದುರ್ಮರಣ!

Leave a Comment

DG Ad

RELATED LATEST NEWS

Top Headlines

ಇಬ್ರಾಹಿಂ ಅಲಿ ಖಾನ್ ಜೊತೆ ಶ್ರೀಲೀಲಾ ಮಿಂಚಿಂಗ್​​ – ಬಾಲಿವುಡ್‌ಗೆ ಹಾರಿದ್ರಾ ಕನ್ನಡದ ಚೆಲುವೆ ?

ಮುಂಬೈ : ಕನ್ನಡದ ನಟಿ ಶ್ರೀಲೀಲಾ ಅವರು ಸೂಪರ್​ ಹಿಟ್​ ‘ಪುಷ್ಪ 2’ ಚಿತ್ರದಲ್ಲಿ ಕಿಸ್ಸಿಕ್ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗೆ ಪಾದಾರ್ಪಣೆ

Live Cricket

Add Your Heading Text Here