Download Our App

Follow us

Home » ಸಿನಿಮಾ » “ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!

“ಫಾರೆಸ್ಟ್”ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಫ್ಯಾನ್ಸ್ ಫಿದಾ – ಅಡ್ವೆಂಚರ್ಸ್ ಕಾಮಿಡಿಯ ಸಿನಿಮಾ ಜನವರಿ 24ಕ್ಕೆ ರಿಲೀಸ್!

ಬೆಂಗಳೂರು : ಆರಂಭದಿಂದಲೂ ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚೆಗೆ ಬಿಡುಗಡೆಯಾಗಿ 5 ಮಿಲಿಯನ್​ಗೂ ಅಧಿಕ ವೀಕ್ಷಣೆಯಾಗಿದೆ. “ಬಹದ್ದೂರ್” ಖ್ಯಾತಿಯ ಚೇತನ್ ಕುಮಾರ್ ಅವರು ಬರೆದು ಚಂದನ್ ಶೆಟ್ಟಿ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ “ಪೈಸಾ ಪೈಸಾ ಪೈಸಾ” ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಧರ್ಮವಿಶ್ ಸಂಗೀತ ನೀಡಿರುವ ಈ ಹಾಡಿಗೆ ಅಜಯ್ ಶಿವಶಂಕರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. RAP ಶೈಲಿಯಲ್ಲಿರುವ “ಪೈಸಾ ಪೈಸಾ ಪೈಸಾ” ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಶೀರ್ಷಿಕೆಯಿಂದಲೇ ಜನರ ಮನಸ್ಸಿಗೆ ಹತ್ತಿರವಾಗಿರುವ “ಫಾರೆಸ್ಟ್” ಸಿನಿಮಾ ಜನವರಿ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಜನವರಿ 10ರಂದು ಟ್ರೇಲರ್ ಬಿಡುಗಡೆಯಾಗಲಿದೆ. ಬಿಡುಗಡೆಗೂ ಪೂರ್ವವಾಗಿ ಈ ಚಿತ್ರದ ಪ್ರಚಾರ ಬಿರುಸಿನಿಂದ ಸಾಗಿದೆ. ನಮ್ಮ ಚಿತ್ರದ ಪ್ರಚಾರಕ್ಕೆ ಪಿ.ವಿ.ಆರ್ ಸಂಸ್ಥೆ ಕೈಜೋಡಿಸಿದೆ. ಜನವರಿ ಹತ್ತರಿಂದ ಎಲ್ಲಾ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್​​​ಗಳಲ್ಲಿ ಟ್ರೇಲರ್ ಪ್ರದರ್ಶನವಾಗಲಿದೆ. ಜನವರಿ 24ರಂದು “ಫಾರೆಸ್ಟ್” ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ ಎಂದು ನಿರ್ಮಾಪಕ ಎನ್ ಎಂ ಕಾಂತರಾಜ್ ತಿಳಿಸಿದ್ದಾರೆ.


ಕಾಡಿನಲ್ಲೇ ಹೆಚ್ಚು ಭಾಗದ ಚಿತ್ರೀಕರಣ ನಡೆದಿರುವ “ಫಾರೆಸ್ಟ್” ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ.  ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೇ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ “ಫಾರೆಸ್ಟ್” ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರದ ತಾರಾಬಳಗದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದವರಿದ್ದಾರೆ.

ಗಣರಾಜ್ಯೋತ್ಸವದ ಸಂಭ್ರಮದ ಮುನ್ನವೇ ಜನವರಿ 24 ರಂದು “ಫಾರೆಸ್ಟ್” ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಸಖತ್ ಹಿಟ್ ಆಗಿರುವ “ಪೈಸಾ ಪೈಸಾ ಪೈಸಾ” ಹಾಡಿನ ಜೊತೆ ಸಿನಿಮಾ ಕೂಡ ಕಣ್ತುಂಬಿಕೊಳ್ಳಲು ಸಿನಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : ಸಿಎಂ ಸಮ್ಮುಖದಲ್ಲೇ ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲರು – ಕೊನೆಗೂ ದಶಕಗಳ ಹೋರಾಟ ಅಂತ್ಯ.. 6 ಮಂದಿ ಮುಖ್ಯವಾಹಿನಿಗೆ!

Leave a Comment

DG Ad

RELATED LATEST NEWS

Top Headlines

ಕೈಯಲ್ಲಿ ಮಚ್ಚು ಹಿಡಿದು ಮಾಸ್​ ಅವತಾರ ತಾಳಿದ ‘ಅಭಿನಯ ಚತುರ’ – ‘ದಿ ರೈಸ್ ಆಫ್ ಅಶೋಕ’ ಮೋಷನ್ ಪೋಸ್ಟರ್ ರಿಲೀಸ್!

ಬೆಂಗಳೂರು :  ಅಭಿನಯ ಚತುರ ನೀನಾಸಂ ಸತೀಶ್ ನಟಿಸುತ್ತಿರುವ ಅಶೋಕ ಬ್ಲೇಡ್ ಸಿನಿಮಾವೀಗ ಶೀರ್ಷಿಕೆ ಬದಲಾವಣೆಯೊಂದಿಗೆ ಮತ್ತೆ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ. ಅಶೋಕ್ ಬ್ಲೇಡ್ ಬದಲಿಗೆ ‘ದಿ ರೈಸ್

Live Cricket

Add Your Heading Text Here