Download Our App

Follow us

Home » ಸಿನಿಮಾ » ಕನ್ನಡದ ಹೆಸರಾಂತ ನಟನಿಗೆ ಒಲಿದ ಗೌರವ – ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ಕುಮಾರ್ ರಾಯಭಾರಿ!

ಕನ್ನಡದ ಹೆಸರಾಂತ ನಟನಿಗೆ ಒಲಿದ ಗೌರವ – ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ಕುಮಾರ್ ರಾಯಭಾರಿ!

ಬೆಂಗಳೂರು : ಭಾರತದ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ರಾಯಭಾರಿ ನೇಮಕದ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

2024-2025ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಿಲಾಗಿದೆ. ಅಂತಾರಾಷ್ಟ್ರೀಯ ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಮಾಡುವ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್. ಜಿ ಅವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

​ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಸೇರಿ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

​16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಸಭೆ ನಡೆಸಿ ಚಲನಚಿತ್ರೋತ್ಸವ ಬಗ್ಗೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಚಲನಚಿತ್ರೋತ್ಸವದಲ್ಲಿ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ : ಸಿನಿಮಾ ರಂಗದಲ್ಲಿ ಕೆಲಸ ಮಾಡುವ ಕನಸು ಇದ್ಯಾ ? – ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯಿಂದ ಉಚಿತ ತರಬೇತಿ!

Leave a Comment

DG Ad

RELATED LATEST NEWS

Top Headlines

ವೈದ್ಯಕೀಯ ಕ್ಷೇತ್ರದಲ್ಲಿ 4 ದಶಕಗಳ ನಿಸ್ವಾರ್ಥ ಸೇವೆ – ಪ್ರತಿಷ್ಠಿತ API ಪಿಜಿಶಿಯನ್ ಅವಾರ್ಡ್​ಗೆ ಭಾಜನರಾದ ಡಾ.ಚಂದ್ರಕಾಂತ ಗುದಗೆ!

ಬೀದರ್ : ಬೀದರ್ ನಗರದ ಪ್ರಸಿದ್ಧ ‘ಗುದಗೆ’ ಆಸ್ಪತ್ರೆ ಸಂಸ್ಥಾಪಕರಾದ ಖ್ಯಾತ ಹೃದ್ರೋಗ ತಜ್ಞ ಡಾ.ಚಂದ್ರಕಾಂತ ಗುದಗೆ ಅವರು ಪ್ರತಿಷ್ಠಿತ API ಪಿಜಿಶಿಯನ್ ಅವಾರ್ಡ್​ಗೆ ಭಾಜನರಾಗಿದ್ದಾರೆ. ಇತ್ತೀಚೆಗೆ

Live Cricket

Add Your Heading Text Here