Download Our App

Follow us

Home » ಅಪರಾಧ » ಮಂಗಳೂರು : 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಗ್ಯಾಂಗ್​​ ಅರೆಸ್ಟ್..!

ಮಂಗಳೂರು : 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಗ್ಯಾಂಗ್​​ ಅರೆಸ್ಟ್..!

ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ನಿಗೂಢ ಕೆಲಸಕ್ಕಾಗಿ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಧರ್ಮಸ್ಥಳ ಪೊಲೀಸರು ಯುವಕರನ್ನು ತಪಾಸಣೆ ನಡೆಸಿದಾಗ 42 ಅಕ್ರಮ ಸಿಮ್​ಗಳು ಪತ್ತೆಯಾಗಿದೆ.

ಯುವಕರ ತಂಡ ಅನುಮಾನಾಸ್ಪದ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ.

ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ. 20 ವರ್ಷದ ರಮೀಝ್ , 24 ವರ್ಷದ ಅಕ್ಬರ್ ಅಲಿ, 22 ವರ್ಷದ ಮೊಹಮ್ಮದ್ ಮುಸ್ತಫಾ, 27 ವರ್ಷದ ಮೊಹಮ್ಮದ್ ಸಾಧಿಕ್ ಬಂಧಿತ ಆರೋಪಿಯಾಗಿದ್ದು, ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಒಳಗೊಂಡಿದ್ದಾನೆ.

ಆರೋಪಿ ಅಕ್ಬರ್​ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್​ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ಫಾರಿನ್​​​ ಲಿಂಕ್​ ಇರೋದ್ರಿಂದ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಸ್ನೇಹಿತನ ಜೊತೆ ಮಾಲ್​​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಮಹಿಳೆ ಮನೆ ಮೇಲೆ ದಾಳಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here