Download Our App

Follow us

Home » ರಾಜ್ಯ » ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ – ಗವಿಗಂಗಾಧರೇಶ್ವರನಿಗೆ ಇಂದು ಸೂರ್ಯ ರಶ್ಮಿ ಸಿಂಚನ..!

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ – ಗವಿಗಂಗಾಧರೇಶ್ವರನಿಗೆ ಇಂದು ಸೂರ್ಯ ರಶ್ಮಿ ಸಿಂಚನ..!

ಬೆಂಗಳೂರು : ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ವಿಶೇಷವಾಗಿ ಗವಿಪುರದಲ್ಲಿರುವ ಗವಿಗಂಗಾಧರ ಸನ್ನಿಧಿಯಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ದೇವಾಲಯ ಇಂದು ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.

ಗವಿಗಂಗಾಧರೇಶ್ವರ ದೇವಸ್ಥಾನದ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಲಿದ್ದು, ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಬೆಳ್ಳಗ್ಗೆ 5 ಗಂಟೆಯಿಂದಲೇ ಗಂಗಾಧರನಿಗೆ ವಿಶೇಷ ಪೂಜೆ ಆರಂಭವಾಗಿದೆ. ಗಂಗಾಧರನಿಗೆ ಪಂಚಾಭೀಷೇಕ, ಪುಷ್ಪಾಭಿಷೇಕ, ಮಹಮಂಗಳಾರತಿ‌ ಮಾಡಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ವಿಶೇಷ ವಿದ್ಯಮಾನವನ್ನು ಕಣ್ತುಂಬಿಕೊಳ್ಳಲಿರುವ ಭಕ್ತರು ಕಾತರದಿಂದ ಇದ್ದು, ಸಾವಿರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಬರುವ ನಿರೀಕ್ಷೆ ಇದೆ. ಹಬ್ಬದ ಹಿನ್ನೆಲೆ ಮುಂಜಾನೆಯಿಂದಲೇ ದೇಗುಲಕ್ಕೆ ಭಕ್ತಸಾಗರ ಹರಿದುಬರುತ್ತಿದೆ.

ದೇಗುಲದಲ್ಲಿ ಮಧ್ಯಾಹ್ನ ಒಂದು ಗಂಟೆಯವರೆಗೂ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು, ಅದಾದ ನಂತರ ದೇವಾಲಯದಲ್ಲಿ ಶುದ್ದಿ ಕಾರ್ಯ ನಡೆಯಲಿದೆ. ಈ ಬಾರಿ ಸಂಜೆ 5.14 ರಿಂದ 5.17ರವರೆಗೆ ಅಂದರೆ 3 ನಿಮಿಷಗಳ ನಡುವೆ ಸೂರ್ಯ ರಶ್ಮಿ ಗವಿಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸಲಿದೆ. ಈ ವೇಳೆ ಶಿವನ ವಿಗ್ರಹಕ್ಕೆ ಎಳನೀರು ಮತ್ತು ಕ್ಷೀರದಿಂದ ಅಭಿಷೇಕ ಮಾಡಲಾಗುತ್ತದೆ. ಭಕ್ತರು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ದೇವರನ್ನು ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನು ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಒಳ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ.

ಇನ್ನೂ.. ಈ ಮಕರ ಸಂಕ್ರಮಣ ಹಲವು ಅದ್ಬುತಗಳಿಗೆ ಕಾರಣವಾಗುತ್ತದೆ. ಒಂದು ಕಡೆ ಗವಿಗಂಗಧಾರೇಶ್ವರ ದೇಗುಲದಲ್ಲಿ ಸೂರ್ಯನ ಕಿರಣವು ಶಿವನನ್ನ‌ ಸ್ಪರ್ಶಿಸಿದರೇ. ಮತ್ತೊಂದು ಕಡೆ ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ಮಕರ ಜ್ಯೋತಿ ಕಾಣಿಸಿಕೊಳ್ಳುತ್ತದೆ.

ಈಗಾಗಲೇ ಕಳೆದ ಎರಡು ದಿನದಿಂದಲೂ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದೆ. ಪಂಪಾದಲ್ಲಿ ನಿನ್ನೆ ದೀಪೋತ್ಸವ ನಡೆದಿದ್ದು, ಇಂದು ಅಂದರೆ ಜನವರಿ 14ರಂದು ಸಂಜೆ 5ಕ್ಕೆ ತಿರುವಾಭರಣ ಘೋಷಯಾತ್ರೆ ಶರಂಗುತ್ತಿಗೆ ಆಗಮಿಸುತ್ತದೆ.

ನಂತರ ಸಂಜೆ 6.30ಕ್ಕೆ ಅಯ್ಯಪ್ಪನಿಗೆ ಚಿನ್ನಾಭರಣ ತೊಡಿಸಿ ದೀಪಾರಾಧನೆ ಮಾಡಲಾಗುತ್ತದೆ. ಇದಾದ ಬಳಿಕ ಭಕ್ತರೆಲ್ಲರೂ ವರುಷ ಪೂರ್ತಿ ಕಾತುರದಿಂದ ಕಾಯುವ ಮಕರಜ್ಯೋತಿಯ ದರ್ಶನವಾಗುತ್ತದೆ. ವರ್ಷ ಒಮ್ಮೆ ಅಯ್ಯಪ್ಪ ಸ್ವಾಮಿಯೂ ಈ ರೀತಿ ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾರೆ ಎಂಬ ನಂಬಿಕೆ ಜನರಲ್ಲಿ ಇದೆ.

ಇದನ್ನೂ ಓದಿ : ‘ನಿಮಗೊಂದು ಸಿಹಿಸುದ್ದಿ’ ಚಿತ್ರದ ಮೋಷನ್ ಪೋಸ್ಟರ್ ಲಾಂಚ್ – ಶೀಘ್ರವೇ ಸಿನಿಮಾ ತೆರೆಗೆ!

Leave a Comment

DG Ad

RELATED LATEST NEWS

Top Headlines

ಅಯ್ಯಪ್ಪ ಸ್ವಾಮಿ ಜಾತ್ರೆಯಲ್ಲಿ ನೆರೆದಿದ್ದ ಭಕ್ತರ ಮೇಲೆ ಹರಿದ ಕಾರು – ಯುವತಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ!

ಉತ್ತರ ಕನ್ನಡ : ಅಯ್ಯಪ್ಪ ಸ್ವಾಮಿ ದೇಗುಲದ ಜಾತ್ರಾ ಮಹೋತ್ಸವದಲ್ಲಿ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಓರ್ವ ಯುವತಿ ಸಾವನ್ನಪ್ಪಿ, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ

Live Cricket

Add Your Heading Text Here