ಮೃತ ತಪಸ್ ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದು, ಅಮಿಟಿ ವಿಶ್ವವಿದ್ಯಾನಿಲಯದಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ. ಈ ವೇಳೆ ಯುವತಿಯ ಪರಿಚಯವಾಗಿತ್ತು. ಅವರಿಬ್ಬರ ನಡುವೆ ಸಂಬಂಧ ಬೆಳೆದಿತ್ತು. ಬಳಿಕ ಅವರಿಬ್ಬರು ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ಇತ್ತೀಚೆಗಷ್ಟೇ ಇಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಆತನ ಮಾಜಿ ಪ್ರೇಯಸಿ ಸಂಬಂಧವನ್ನು ಕೊನೆಗೊಳಿಸುವಂತೆ ನಿರ್ಧರಿಸಿದ್ದಳು. ಇದನ್ನು ತಿಳಿದ ತಪಸ್ ಸಂಬಂಧವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದನು.
ಶನಿವಾರ ನೋಯ್ಡಾದ ಸೆಕ್ಟರ್ 99ರಲ್ಲಿ ಸುಪ್ರೀಂ ಟವರ್ಸ್ನಲ್ಲಿರುವ ಸ್ನೇಹಿತನ ಮನೆಗೆ ತಪಸ್ ಭೇಟಿ ನೀಡಿದ್ದರು. ಈ ವೇಳೆ ಆತನ ಸ್ನೇಹಿತರು ಮಾಜಿ ಪ್ರೇಯಸಿಯೊಂದಿಗೆ ಸಂಬಂಧ ಸರಿಪಡಿಸಿಕೊಳ್ಳುವಂತೆ ತಿಳಿಸಿದ್ದರು. ಬಳಿಕ ಆತನ ಪ್ರೇಯಸಿ ಅಲ್ಲಿಗೆ ಬಂದಿದ್ದು, ಈ ಸಮಯದಲ್ಲಿ ತಪಸ್ ಆಕೆಯ ಮನವೊಲಿಸಲು ಪ್ರಯತ್ನಿಸಿದ್ದ.
ಆದರೆ ಆಕೆ ಒಪ್ಪದ ಕಾರಣ ತಪಸ್ 7ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ನೋಯ್ಡಾ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪ್ರಭಾಸ್ ನಟನೆಯ ‘ದಿ ರಾಜಾಸಾಬ್‘ ಸಿನಿಮಾ ತಂಡದಿಂದ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ!