ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪದ ಪ್ರಕರಣದಡಿ ಜೈಲಿನಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಪ್ರಮುಖ ಸಾಕ್ಷಿ ಆಗಿರುವ ವಿಡಿಯೋ ಹಾಗೂ ಫೋಟೋವನ್ನು ತಮ್ಮ ಸುಪರ್ದಿಗೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ನನ್ನ ವಿಡಿಯೋ ನನಗೆ ಕೊಡಿ ಎಂದು ಕೋರ್ಟ್ನಲ್ಲಿ SIT ಸೀಜ್ ಮಾಡಿರೋ ವಿಡಿಯೋಗಾಗಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ. ಪ್ರಜ್ವಲ್ ಅರ್ಜಿಗೆ SPP ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಎಲ್ಲಾ ವಿಡಿಯೋ ಫೋಟೋ ನೀಡಲಾಗಿದೆ, ಪ್ರಕರಣ ವಿಳಂಬ ಮಾಡೋದಕ್ಕೆ ಈ ರೀತಿ ಅರ್ಜಿ ಹಾಕ್ತಿದ್ದಾರೆ. ಕೆಳಹಂತದ ಕೋರ್ಟ್ನಲ್ಲಿ CDR ಕೇಳಿ ಅರ್ಜಿ ಹಾಕಿದ್ದಾರೆ, ಇತರೆ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೇಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ, ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ತೀವ್ರ ಬೇಸರ ವ್ಯಕ್ತಪಡಿಸಿದೆ.
ಪ್ರಕರಣ ದಾಖಲು ಮಾಡಿದವರ ವಿಡಿಯೋ ಮಾತ್ರ ನೀಡಲು ಕೋರ್ಟ್ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ಅಂದ ಕೂಡ್ಲೇ ಕಾನೂನು ಬದಲಾವಣೆ ಸಾಧ್ಯವಿಲ್ಲ, ಮಹಿಳೆಯರ ಖಾಸಗಿತನ ಗೌರವಿಸುವುದು ಕರ್ತವ್ಯ ಎಂದು ಹೈಕೋರ್ಟ್ ತಿಳಿಸಿದೆ. ವಾದ ಪ್ರತಿವಾದದ ಬಳಿಕ ಕೋರ್ಟ್ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ : ಬೀದರ್ನಲ್ಲಿ ATM ರಾಬರಿ ವೇಳೆ ಕಳ್ಳರ ಅಟ್ಟಹಾಸ – ದರೋಡೆಕೋರರ ಶೂಟೌಟ್ಗೆ ಇಬ್ಬರು ಸಿಬ್ಬಂದಿ ಬಲಿ!