ವಿಜಯಪುರ : ವಿಜಯಪುರ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಬಳಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಿವಶಕ್ತಿ ನಗರದ 32 ವರ್ಷದ ಫಿರೋಜ್ ಮುಲ್ಲಾ ಮೇಲೆ ಮತ್ತೋರ್ವ ತಲ್ವಾರ್ನಿಂದ ಹಲ್ಲೆ ಮಾಡಿದ್ದಾನೆ.
ಘಟನೆ ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೂವಿನ ವ್ಯಾಪಾರ ಮಾಡುತ್ತಿದ್ದ ಫಿರೋಜ್ ಮೇಲೆ ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಅನ್ನೋ ಬಗ್ಗೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.
ತೀವ್ರ ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳ ನೇಮಕ : ಇಲ್ಲಿದೆ ಪಟ್ಟಿ..!
Post Views: 57