Download Our App

Follow us

Home » ಜಿಲ್ಲೆ » ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ : ವಿಡಿಯೋ ವೈರಲ್..!

ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ : ವಿಡಿಯೋ ವೈರಲ್..!

ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಇಂಥದೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌ ಲೋಕೇಶನ್‌ ಮಾಡಿಕೊಂಡು ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಕೊನೆಗೆ ಆಪರೇಷನ್‌ ಮುಗಿದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ಇದೀಗ ಡಾ.ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ವೈದ್ಯರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಜನರು ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ : ಹಿರಿಯ ಪೊಲೀಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜೀನಾಮೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here