ಜಮ್ಮು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ಆಕ್ರಮಿತ ಪ್ರದೇಶದಲ್ಲಿ ಏರ್‌ಸ್ಟ್ರೈಕ್ ನಡೆಸಿದೆ. ಆಪರೇಷನ್ ಸಿಂಧೂರ್ ಹೆಸರಿಲ್ಲಿ 9 ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಲಾಗಿದ್ದು, 70 ಕ್ಕೂ ಹೆಚ್ಚು ಉಗ್ರರರನ್ನು ಸಂಹಾರ ಮಾಡಿದೆ. ದಾಳಿಯಲ್ಲಿ ಸುಮಾರು 55 ಮಂದಿ ಉಗ್ರರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಮಿಸೈಲ್ ಅಟ್ಯಾಕ್ಗೆ ಪಾಕಿಸ್ತಾನ ಬೆಚ್ಚಿಬಿದ್ದಿದ್ದು, ಭಯೋತ್ಪಾದಕರ ನೆಲೆಗಳು ಪುಡಿಪುಡಿಯಾಗಿದೆ. ಭಾರತವನ್ನು ಕೆಣಕಿದವರು ನೆಲಸಮ ಆಗಿದ್ದಾರೆ. ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.


ಭಾರತದ 26 ಸಹೋದರಿಯರ ಕುಂಕುಮ ಅಳಿಸಿದ್ದಕ್ಕೆ ನಡೆಸಿದ ಪ್ರತೀಕಾರಕ್ಕೆ ʼಆಪರೇಷನ್ ಸಿಂಧೂರʼ ಎಂಬ ಹೆಸರನ್ನು ಇಡಲಾಗಿದೆ. ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಸುಮಾರು 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು ಬೆಳಗ್ಗೆ ರಕ್ಷಣಾ ಸಚಿವಾಲಯ ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದು, ಈ ಬಗ್ಗೆ ನಿಖರ ಮಾಹಿತಿ ಸಿಗಲಿದೆ.
ಇದನ್ನೂ ಓದಿ : ಬೇಬಿ ಬಂಪ್ನೊಂದಿಗೆ ‘ಮೆಟ್ ಗಾಲಾ’ ಫ್ಯಾಷನ್ ಹಬ್ಬದಲ್ಲಿ ಹೆಜ್ಜೆ ಹಾಕಿದ ಕಿಯಾರಾ ಅಡ್ವಾಣಿ.. ಫೋಟೋಸ್ ವೈರಲ್!







