ಬೆಂಗಳೂರು : ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಅಕ್ರಂ ಅಲಿಯಾಸ್ ಅಕ್ಕು ಎಂಬಾತನನ್ನು ಗೋವಿಂದಪುರ ಠಾಣೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ರೌಡಿಶೀಟರ್ ಮೊಹಮ್ಮದ್ ಅಕ್ರಂ 2011ರಿಂದಲೂ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಕೊಲೆ ಪ್ರಯತ್ನ, ಹಲ್ಲೆ, ಸುಲಿಗೆ ಸೇರಿ 21 ಪ್ರಕರಣಗಳಲ್ಲಿ ಆರೋಪಿಯಾಗಿದ್ದನು.
ಪ್ರಕರಣವೊಂದರಲ್ಲಿ ಅಕ್ರಂ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ಎಂಟು ಜಾಮೀನು ರಹಿತ ವಾರಂಟ್‌ಗಳು ಜಾರಿಯಾಗಿದ್ದವು. ಆರೋಪಿ ಅಕ್ರಂ ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಕಾರಣ ಗೋವಿಂದಪುರ ಠಾಣೆ ಪೊಲೀಸರು ಇದೀಗ ಬಂಧಿಸಿ, ಕಲಬುರಗಿ ಕೇಂದ್ರ ಕಾರಾಗೃಹದ ವಶಕ್ಕೆ ನೀಡಿದ್ದಾರೆ.
ಇದನ್ನೂ ಓದಿ : http://‘ಬಮೂಲ್’ ಎಲೆಕ್ಷನ್ಗೆ ಡೇಟ್ ಫಿಕ್ಸ್ – KMF ಅಧ್ಯಕ್ಷ ಸ್ಥಾನದ ಮೇಲೆ ಡಿಕೆಸು ಕಣ್ಣು! ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧೆ?
Author: Btv Kannada
Post Views: 348









