ಕಲಬುರಗಿ : ತಾಯಿ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ.
45 ವರ್ಷದ ತಾಯಿ ಸುಮಲತಾ ಹಾಗೂ 22 ವರ್ಷದ ಮಗಳು ವರ್ಷಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ನಿನ್ನೆ ಸಾಯಂಕಾಲದಿಂದ ತಾಯಿ ಮಗಳು ನಾಪತ್ತೆಯಾಗಿದ್ರು, ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅಕ್ರಮ ಆಸ್ತಿಗಳಿಕೆ ಪ್ರಕರಣ : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ FIR..!
Post Views: 86