ಮಂಡ್ಯ : ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಶಿಫ್ಟ್ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು, ಒಂದು ಕಾರು ಡಿವೈಡರ್ ಹಾರಿ ಎದುರಿಗೆ ಬಂದ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು : ರಿಷಿ ನಟನೆಯ ‘ರುದ್ರ ಗರುಡ ಪುರಾಣ’ ಸಿನಿಮಾದ ಚಿತ್ರೀಕರಣ ಪೂರ್ಣ..!
Post Views: 837