Download Our App

Follow us

Home » ರಾಜ್ಯ » ವೃದ್ಧರಿಗೆ ‘ಅನ್ನ ಸುವಿಧಾ’ ಯೋಜನೆ ಘೋಷಿಸಿದ ರಾಜ್ಯ ಸರ್ಕಾರ – ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ಆಹಾರ ಧಾನ್ಯ..!

ವೃದ್ಧರಿಗೆ ‘ಅನ್ನ ಸುವಿಧಾ’ ಯೋಜನೆ ಘೋಷಿಸಿದ ರಾಜ್ಯ ಸರ್ಕಾರ – ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ಆಹಾರ ಧಾನ್ಯ..!

ಬೆಂಗಳೂರು : ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವೃದ್ಧರನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ  ಅವರು ಬಜೆಟ್​​ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

80 ವರ್ಷ ಮೇಲ್ಪಟ್ಟ ವಯಸ್ಸಿನವರೇ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡುವ ‘ಅನ್ನ ಸುವಿಧಾ’ ಯೋಜನೆಯನ್ನು ಅವರು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಹಸಿವು ಮುಕ್ತ ಕರ್ನಾಟಕವೇ ನಮ್ಮ ಆಶಯ. ಸಾಮಾಜಿಕ ಭದ್ರತೆಯ ಕಳಕಳಿಯೊಂದಿಗೆ ಈ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅನ್ನ ಸುವಿಧಾ ಯೋಜನೆಯು ಹೋಮ್ ಡೆಲಿವರಿ ಆ್ಯಪ್ ಮೂಲಕ ಜಾರಿಗೆ ತರಲಾಗುವುದು. ಈ ಯೋಜನೆ ಮೂಲಕ 80 ವರ್ಷ ವಯಸ್ಸು ದಾಟಿದ ವೃದ್ಧರ ಅಥವಾ ವೃದ್ಧೆಯರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ 2024ರ ಜನವರಿ ಅಂತ್ಯದ ವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದೂ ಸಿಎಂ ಬಜೆಟ್​​ನಲ್ಲಿ ತಿಳಿಸಿದ್ದಾರೆ.

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here