Download Our App

Follow us

Home » ರಾಜ್ಯ » 20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​​ ಅರೆಸ್ಟ್..!

20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​​ ಅರೆಸ್ಟ್..!

ಚಿಕ್ಕಮಗಳೂರು : ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್​ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ಇಳಿದು ದಾಳಿ ನಡೆಸಿದ ಪೊಲೀಸರು ಸುರೇಶ್​ನನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ 10 ವರ್ಷಗಳಿಂದ ಭೂಗತ ನಕ್ಸಲ್ ಆಗಿದ್ದಾನೆ. ಪೊಲೀಸ್ ಇಲಾಖೆ, ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿದ್ದ.  ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿವೆ. 10 ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿಯಾಗಿದ್ದ.

ಇದನ್ನೂ ಓದಿ : ರಾಜಕೀಯಕ್ಕೆ ಡಾಲಿ ಧನಂಜಯ್​ ಎಂಟ್ರಿ? ಮೈಸೂರು ಲೋಕಸಭಾ ಕ್ಷೇತ್ರದಿಂದ ಪ್ರತಾಪ್‌ ಸಿಂಹಗೆ ಎದುರಾಳಿ ಆಗ್ತಾರಾ ಖ್ಯಾತ ನಟ?

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here