ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.
ಶಾಸಕ ರವಿಕುಮಾರ್ ಗೌಡ ಕೊಟ್ಟ ದೂರಿನ ಮೇಲೆ FIR ದಾಖಲಾಗಿದ್ದು, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಡಾ.ಮಹಾಂತೇಶ್, ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ FIR ದಾಖಲಾಗಿದೆ. IPC ಸೆಕ್ಷನ್ 171E, 506,171ರಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಾಸಕ ರವಿಕುಮಾರ್ ಗೌಡ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದು, ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರಿಗೆ ಆಮಿಷವೊಡ್ಡಿದ ಆರೋಪ ಕೇಳಿಬಂದಿದೆ. ಹರಪನಹಳ್ಳಿ ಪಕ್ಷೇತರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿ ಹಲವರಿಗೆ ಆಮಿಷವೊಡ್ಡಿದ್ದಾರೆ. ಅಡ್ಡ ಮತದಾನ ಮಾಡಲು ಹಣದ ಆಮಿಷವೊಡ್ಡಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ರವಿಕುಮಾರ್ ಗೌಡ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ.
ಇದನ್ನೂ ಓದಿ : ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ವಿಜಯೇಂದ್ರ ಗ್ರೀನ್ ಸಿಗ್ನಲ್..!