Download Our App

Follow us

Home » ಸಿನಿಮಾ » ‘ಕರಟಕ ದಮನಕ’ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..!

‘ಕರಟಕ ದಮನಕ’ ಚಿತ್ರದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..!

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್​​ಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “ಕರಟಕ ದಮನಕ” ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಮೊನ್ನೆಯಷ್ಟೇ ಈ  ಚಿತ್ರದ ಎರಡನೇ ಗೀತೆ ಡೀಗ ಡಿಗರಿ ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಅಬುದಾಬಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ : ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ರಾಜ್ಯಾದ್ಯಂತ ಹೌಸ್​​ಫುಲ್ ಪ್ರದರ್ಶನ, ಪೃಥ್ವಿ-ಮಿಲನಾ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here