ಬೆಂಗಳೂರು : ವಿಧಾನಸೌಧದಲ್ಲಿ ನಿನ್ನೆ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ನ ಡಾ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ದೃಢಪಟ್ಟರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ವಿಧಾನಸೌಧದ ಬಳಿ ಮಾತಾಡಿದ ಸಿದ್ದರಾಮಯ್ಯ, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ರೆ ತಪ್ಪು. ಅದು ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, FSL ವರದಿ ಬಂದ ನಂತರ ಘೋಷಣೆಯ ಸತ್ಯಾಸತ್ಯತೆ ಗೊತ್ತಾಗುತ್ತೆ. ನಿಜವೇ ಆಗಿದ್ದರೆ ಗಂಭೀರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನ ಸಭೆಯಂಥ ಪವಿತ್ರ ಸ್ಥಳದಲ್ಲಿ ರಾಷ್ಟ್ರವಿರೋಧಿ ಘೋಷಣೆಗಳು ಕೇಳಿ ಬರುತ್ತಿವೆಯಲ್ಲ ಎಂದು ಕೇಳಿದಾಗ, ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿದ್ರೆ ತಪ್ಪು. ಸಾಬೀತಾದ್ರೆ ಯಾರೇ ಆದ್ರೂ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ : “ಶಭ್ಬಾಷ್” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ..!