Download Our App

Follow us

Home » ಅಪರಾಧ » ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ನಾಲ್ಕನೇ ದಿನವೂ ಬಾಂಬರ್​ಗಾಗಿ ಪೊಲೀಸರ ಶೋಧ..!

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ : ನಾಲ್ಕನೇ ದಿನವೂ ಬಾಂಬರ್​ಗಾಗಿ ಪೊಲೀಸರ ಶೋಧ..!

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ಕನೇ ದಿನವೂ ಬಾಂಬರ್​ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಸಿಸಿಬಿ ತಂಡಗಳಿಂದ ತನಿಖೆ ಮುಂದುವರೆದಿದ್ದು, CCTV ಚಲನವಲನ ಬಿಟ್ರೆ ಆರೋಪಿ ಬಗ್ಗೆ ಬೇರೆ ಸುಳಿವು ಸಿಕ್ಕಿಲ್ಲ.

ಆರೋಪಿಗಾಗಿ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಹುಡುಕಾಟ ನಡೆಸಿದ್ದಾರೆ. ರಾಮೇಶ್ವರಂ ಕೆಫೆಯ ಬೇರೆ ಬೇರೆ ಬ್ರಾಂಚ್​ಗಳಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬೇರೆ ಬೇರೆ ಬ್ರಾಂಚ್​ಗಳಲ್ಲೂ ಶಂಕಿತ ಓಡಾಡಿರುವ ಶಂಕೆ ವ್ಯಕ್ತವಾಗಿದೆ.

ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ ತನಿಖೆ NIAಗೆ ವರ್ಗಾವಣೆಯಾಗಿದೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.

ಬೆಂಗಳೂರಿನ ಕುಂದನಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ನಡೆದು 3 ದಿನಗಳಾಯ್ತು. ಆದರೆ ಶಂಕಿತ ವ್ಯಕ್ತಿಯನ್ನು ಪತ್ತೆ ಹಚ್ಚುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜೊತೆಗೆ ಆತ ಸ್ಫೋಟಕ್ಕಾಗಿ ಮಾಡಿದ್ದ ಪ್ಲಾನ್​ ಪೊಲೀಸರಿಗೆ ನಿಜಕ್ಕೂ ಚಾಲೆಂಜಿಂಗ್‌ ಆಗಿದೆ. ಈ ಪ್ರಕರಣದ ತನಿಖೆ ಇದೀಗ ಮತ್ತಷ್ಟು ಚುರುಕುಗೊಂಡಿದೆ.

ಇದನ್ನೂ ಓದಿ : ಟ್ರೇಲರ್​​ನಲ್ಲೇ ಮೋಡಿ ಮಾಡಿದ ವಿಜಯ ರಾಘವೇಂದ್ರ ನಟನೆಯ ‘ಜೋಗ್ 101’ ಚಿತ್ರ ಮಾ.7ಕ್ಕೆ ರಿಲೀಸ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here