ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ – ಡಿಸಿಎಂ ಡಿಕೆಶಿ ಎಚ್ಚರಿಕೆ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಕೊಟ್ರು ಮಹತ್ವದ ಸುಳಿವು!

ಬೆಂಗಳೂರು : ಬೆಂಗಳೂರಿನಲ್ಲಿ 2022ರಲ್ಲಿ ಸ್ಥಗಿತಗೊಂಡಿದ್ದ ವಾಹನಗಳ ಟೋಯಿಂಗ್‌ ಮತ್ತೆ ಆರಂಭವಾಗಲಿದ್ದು, ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಖಡಕ್ ಎಚ್ಚರಿಕೆ ಕೊಟ್ಟಿದ್ದರು.

ರಸ್ತೆ ಬದಿ ವಾಹನಗಳ ಟೋಯಿಂಗ್ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಇಂದು ಗೃಹ ಸಚಿವ ಪರಮೇಶ್ವರ್​​ ಅವರು ಪ್ರತಿಕ್ರಿಯಿಸಿ, ಆ ಕುರಿತು ಚರ್ಚಿಸಲಾಗಿದೆ. ನನ್ನ ಗಮನಕ್ಕೆ ತಂದಿದ್ದರು. ಟೋಯಿಂಗ್​ನಿಂದ ಸಾರ್ವಜನಿಕರಿಗೆ ಉಪಯೋಗ ಆಗುವುದಾದರೆ ಮತ್ತೆ ಜಾರಿಗೆ ತರುತ್ತೇವೆ.

ಆದ್ರೆ, ಅದು ಸಾರ್ವಜನಿಕರಿಗೆ ತೊಂದರೆ ಆಗುವುದಾದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಸಾರ್ವಜನಿಕರಿಗೆ ಉಪಯೋಗ ಆಗಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ತಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬೇಡಿ – ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ!

Btv Kannada
Author: Btv Kannada

Read More