ನಾಳೆ ‘ರಾಜು ಜೇಮ್ಸ್ ಬಾಂಡ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ – ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಪರಮೇಶ್ವರ್, ನಟಿ ರಮ್ಯಾ ಆಗಮನ!

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ನಿರ್ಮಿಸಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಫೆ.11ರಂದು ನಡೆಯಲಿದೆ.

ಪ್ರೀ ರಿಲೀಸ್ ಇವೆಂಟ್​ಗೆ ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ನಟಿ ರಮ್ಯಾ ಅವರು ಆಗಮಿಸಲಿದ್ದಾರೆ.

ನಗುವೇ ಪ್ರಧಾನವಾಗಿರುವ ಈ ಚಿತ್ರ ಫೆಬ್ರವರಿ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಗುರುನಂದನ್​ಗೆ ನಾಯಕಿಯಾಗಿ ಮೃದುಲ ಅಭಿನಯಿಸಿದ್ದಾರೆ. ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Btv Kannada
Author: Btv Kannada

Leave a Comment

Read More