ಬೆಂಗಳೂರು : ಈಜಲು ಬಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಗರ ಕೆರೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಒಟ್ಟು 11 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಈಜಲು ನೀರಿಗೆ ಇಳಿದಿದ್ದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.
ದೊಡ್ಡಬೆಲೆ ಮೂಲದ ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ NIA..!
Post Views: 323