ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ “ಮದನಿಕ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟಿ ರಾಗಿಣಿ ಅವರ ಕಾಲಿಗೆ ಪೆಟ್ಟಾಗಿದೆ. ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ.
ನಟಿ ರಾಗಿಣಿ ದ್ವಿವೇದಿ ಅವರು ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಏನೇ ಬಂದರೂ ಅವರು ಮುನ್ನುಗ್ಗುತ್ತಿದ್ದಾರೆ. ಈಗ ಅವರ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ.
ಕಾಲಿಗೆ ಪೆಟ್ಟಾದ ಫೋಟೋ ವೈರಲ್ ಆಗಿದೆ. ಈ ವೇಳೆಯೂ ಅವರು ಸ್ಮೈಲ್ ಮಾಡುತ್ತಿದ್ದಾರೆ. ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ವೈದ್ಯರು ಹೇಳಿರುವುದಾಗಿ ವರದಿ ಆಗಿದೆ. ರಾಗಿಣಿ ಒಂದು ವಾರ ವಿಶ್ರಾಂತಿ ಪಡೆಯಬೇಕಿದೆ.
ಮದನಿಕ’ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇದರ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿತ್ತು. ರಾಗಿಣಿ ಭಾಗದ ಶೂಟಿಂಗ್ನ ಮುಂದೂಡಲಾಗಿದೆ.
ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇದುವರೆಗೆ ಯಾರನ್ನೂ ಬಂಧಿಸಿಲ್ಲ – NIA ಸ್ಪಷ್ಟನೆ..!