ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಕಪ್ ಎತ್ತಿಹಿಡಿದಿದೆ.
14 ರನ್‌ಗಳ ಸುಲಭ ಗುರಿ ಬೆನ್ನತ್ತಿದ RCB ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಅಭಿಮಾನಿಗಳ ಬಹುವರ್ಷದ ಕನಸನ್ನು ಆರ್‌ಸಿಬಿ ಮಹಿಳೆಯರು ನನಸು ಮಾಡಿದ್ದಾರೆ.
16 ಆವೃತ್ತಿ ಕಳೆದರೂ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಮ್ಮೆಯೂ ಟ್ರೋಫಿ ಎತ್ತಿಹಿಡಿಯದ ಆರ್‌ಸಿಬಿ ಪುರುಷರ ತಂಡಕ್ಕೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಮಾದರಿಯಾಗಿದೆ. ಮಹಿಳಾ ಪ್ರೀಮಿಯರ್ ಲೀಗ್‌ನ 2ನೇ ಆವೃತ್ತಿಯಲ್ಲೇ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದು, ಹೆಣ್ಮಕ್ಕಳೇ ಸ್ಟ್ರಾಂಗು ಗುರು ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.
ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.3 ಓವರ್‌ಗಲ್ಲಿ 113 ರನ್ ಗಳಿಗೆ ಆಲೌಟ್ ಆಯಿತು. 114 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ 19.3 ಓವರ್‌ಗಳಲ್ಲೇ 2 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ ಗೆಲುವು ಸಾಧಿಸಿತು.
ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೈಚಳಕ : ಆರ್‌ಸಿಬಿ ಪರ ಬೌಲಿಂಗ್ ಕೈಚಳಕ ತೋರಿದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.3 ಓವರ್‌ಗಳಲ್ಲಿ ಕೇವಲ 12 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ, ಸೋಫಿ ಮೊಲಿನೆಕ್ಸ್ 3 ವಿಕೆಟ್ ಹಾಗೂ ಆಶಾ ಸೋಭನಾ 2 ವಿಕೆಟ್ ಪಡೆದು ಮಿಂಚಿದರು.
ಸಿಕ್ಕ ಬಹುಮಾನ ಮೊತ್ತವೆಷ್ಟು? ಕಳೆದ ಬಾರಿಯಂತೆ ಈ ಬಾರಿಯೂ ಚಾಂಪಿಯನ್ ತಂಡಕ್ಕೆ 6 ಕೋಟಿ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗಿದೆ. ಅಂದರೆ ಚಾಂಪಿಯನ್ ಆರ್‌ಸಿಬಿ ಟ್ರೋಫಿಯೊಂದಿಗೆ 6 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡು ಲೀಗ್ಗೆ ವಿದಾಯ ಹೇಳಿದೆ. ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಮುಗ್ಗರಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟದಿಂದ ವಂಚಿತವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಬಾರಿಯಂತೆ ಈ ಬಾರಿಯೂ ರನ್ನರ್ಅಪ್ಗೆ ತೃಪ್ತಿಪಟ್ಟಿದ್ದು, 3 ಕೋಟಿ ರೂಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.
ಇದನ್ನೂ ಓದಿ : ಎಗ್ ಕರಿ ಮಾಡಲು ನಿರಾಕರಿಸಿದ್ದ ಲಿವಿಂಗ್ ಪಾರ್ಟ್ನರ್ನ ಹತ್ಯೆ : ಆರೋಪಿ ಅರೆಸ್ಟ್..!