ಚಿತ್ರದುರ್ಗ : 2024 ಲೋಕಸಭೆಗೆ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಈ ಬೆನ್ನಲ್ಲೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 38 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ಕಾರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ದಾಖಲೆ ಇಲ್ಲದ 38 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೂಡಲೇ ಹಣವನ್ನು ವಶಕ್ಕೆ ಪಡೆದುಕೊಂಡ ಎಫ್ಎಸ್ಟಿ ಟೀಮ್ ಪರಿಶೀಲನೆ ನಡೆಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘಕ್ಕೆ ಸೇರಿದ ಹಣ ಎಂಬ ಮಾಹಿತಿ ಇದ್ದು, ವಿವಿಧ ಗ್ರಾಮಗಳ ಸಂಘಗಳಿಂದ ಚಳ್ಳಕೆರೆ ಬ್ಯಾಂಕ್ ಆಪ್ ಬರೋಡಾಗೆ ಹಣವನ್ನು ಸಾಗಿಸಲಾಗ್ತಿತ್ತು ಎನ್ನಲಾಗಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಮಾಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ನಾಲ್ವರು ಸಿಬ್ಬಂದಿ ವಿಚಾರಣೆ ನಡೆಸಲಾಗಿದೆ. ಸಿಪಿಐ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ನಡೆದಿದ್ದು, ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ED ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ..!
Post Views: 163