Download Our App

Follow us

Home » ಜಿಲ್ಲೆ » ಚಿಕ್ಕಮಗಳೂರಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ : ಮಹಿಳೆ ಸಾ*ವು, ಎಎಸ್​​ಪಿ ಗನ್​​ಮ್ಯಾನ್ ಸ್ಥಿತಿ ಗಂಭೀರ..!

ಚಿಕ್ಕಮಗಳೂರಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ : ಮಹಿಳೆ ಸಾ*ವು, ಎಎಸ್​​ಪಿ ಗನ್​​ಮ್ಯಾನ್ ಸ್ಥಿತಿ ಗಂಭೀರ..!

ಚಿಕ್ಕಮಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಕಡೂರು ತಾಲೂಕಿನ ತಂಗಲಿ ಬಳಿ ನಡೆದಿದೆ. ಈ ಘಟನೆಯಲ್ಲಿ 25 ವರ್ಷದ ಸುಮಾ ಮೃತಪಟ್ಟ ದುರ್ದೈವಿಯಾಗಿದ್ದು, ಮಹಿಳೆಯ ಪತಿ ದಾವಣಗೆರೆ ಎಎಸ್‍ಪಿ ಗನ್‍ಮ್ಯಾನ್ ಜಯಣ್ಣ ಅವರ ಸ್ಥಿತಿ ಗಂಭೀರವಾಗಿದೆ.

ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕಿನಲ್ಲಿ ಹೋಗುವಾಗ ಈ ಅಪಘಾತ ನಡೆದಿದೆ. ಜಯಣ್ಣ ಅವರು ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ.

ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಜಯಣ್ಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಜೈಪುರ ಟೈಮ್ಸ್ ಫ್ಯಾಷನ್ ವೀಕ್‌ನಲ್ಲಿ ಮಿಂಚಿದ ರಚಿಕಾ ಸುರೇಶ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here