ಮಹಿಳಾ ಅಧಿಕಾರಿಗೆ ಅವಾಚ್ಯ ಪದದಿಂದ ನಿಂದನೆ – ಕಾಂಗ್ರೆಸ್ MLA ಪುತ್ರನ ವಿರುದ್ಧ FIR!

ಶಿವಮೊಗ್ಗ : ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ. ಇದೀಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ನಿಂದಿಸಿರುವ ಬಸವೇಶ್​ ವಿರುದ್ಧ FIR​ ದಾಖಲಾಗಿದೆ. 

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ನೀಡಿದ ದೂರಿನ ಮೇರೆಗೆ ಬಸವೇಶ್​ ವಿರುದ್ಧ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇನ್ನು FIR ದಾಖಲಾಗುತ್ತಿದ್ದಂತೆಯೇ ಭದ್ರಾವತಿ ಡಿವೈಎಸ್​ಪಿ ನಾಗರಾಜ್ ನೇತೃತ್ವ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಅಜಯ್​, ಚನ್ನಗಿರಿ ರಸ್ತೆ ಬಳಿ ರವಿ ಹಾಗೂ ವರುಣ್​ ಎನ್ನುವರನ್ನ ಅರೆಸ್ಟ್ ಮಾಡಿದ್ದಾರೆ.

ಪ್ರಕರಣ : ಅಕ್ರಮ ಮರಳು ಗಣಿಗಾರಿಕೆ ಜಾಗದ ಮೇಲೆ ತಡರಾತ್ರಿ ರೇಡ್ ನಡೆಸಿದ ವೇಳೆ ಘಟನೆ ನಡೆದಿದೆ. ಈ ಮಹಿಳಾ ಅಧಿಕಾರಿಯು ಭದ್ರಾವತಿ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಬಿ.ಕೆ.ಸಂಗಮೇಶ್ ಪುತ್ರನ ತಮ್ಮ ಆಪ್ತನೊಂದಿಗೆ ಮಾತನಾಡುತ್ತ ಮತ್ತು ಭೂ ವಿಜ್ಞಾನ ಮಹಿಳಾ ಅಧಿಕಾರಿಗೆ ಅಶ್ಲೀಲ ಪದಗಳಲ್ಲಿ ನಿಂದಿಸಿದ್ದಾರೆ. ಮಹಿಳಾ ಅಧಿಕಾರಿಯ ಮೇಲೆ MLA ಮಗನ ದರ್ಪದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಇದನ್ನೂ ಓದಿ : http://‘ಸೀಟ್ ಎಡ್ಜ್’ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್.. ರವೀಕ್ಷಾ ಜೊತೆ ರೊಮ್ಯಾಂಟಿಕ್ ಮೂಡ್​ನಲ್ಲಿ ಸಿದ್ದು ಮೂಲಿಮನಿ!

Btv Kannada
Author: Btv Kannada

Leave a Comment

Read More