ಬೆಂಗಳೂರು : ಬೆಳಗಿನ ಜಾವ ಗುಜುರಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ವಸ್ತುಗಳೆಲ್ಲ ಸುಟ್ಟು ಕರಕಲಾಗಿರುವ ಘಟನೆ ನಗರದ ನಾಯಂಡಹಳ್ಳಿ ಬಳಿಯ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಗಂಗೊಂಡನಹಳ್ಳಿಯಲ್ಲಿನ ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗ ಹೊತ್ತಿ ಉರಿದಿದೆ. ಇದರಿಂದಾಗಿ ದಟ್ಟ ಹೊಗೆ ಆರಿಸಿದ್ದರಿಂದ ಸುತ್ತಲಿನ ಜನರೆಲ್ಲ ಭಯಭೀತರಾಗಿದ್ದರು. ತಕ್ಷಣ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳ ಸಮೇತ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗುಜುರಿ ಅಂಗಡಿಯಲ್ಲಿದ್ದ ವೆಸ್ಟೇಜ್ ಎಲ್ಲವೂ ಬೆಂಕಿಗೆ ಆಹುತಿಯಾಗಿವೆ. ಆದರೆ ಇಂತಹ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಇದನ್ನೂ ಓದಿ : ಫೆ.14 ಪ್ರೇಮಿಗಳ ದಿನದಂದು ಬೆಂಗಳೂರಿನಲ್ಲಿ ಮದ್ಯ ಬ್ಯಾನ್ – ಬಾರ್ ಅಸೋಸಿಯೇಷನ್ನಿಂದ ತೀವ್ರ ವಿರೋಧ..!