ಬಾಗಲಕೋಟೆ : ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಟೋಲ್ ನಾಕಾ ಬಳಿ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂಬ ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರು, ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಕಾರು ಮುದ್ದೇಬಿಹಾಳದ ಕಡೆ ಹೊರಟ್ಟಿತ್ತು. ಲಾರಿ ಮುದ್ದೇಬಿಹಾಳದಿಂದ ಹುನಗುಂದ ಕಡೆ ತೆರಳಿತ್ತು. ನಿದ್ದೆ ಮಂಪರಿನಿಂದ ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಮೃತರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿಕೊಂಡು ವಾಪಸ್ ಊರಿಗೆ ಮರಳುವಾಗ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಮಹಾಲಕ್ಷ್ಮಿ ದೇಹ ಪೀಸ್-ಪೀಸ್ ಮಾಡಿದ್ದ ಮುಕ್ತಿ ರಂಜನ್ ಸ್ಮಶಾನದಲ್ಲಿ ಶವವಾಗಿ ಪತ್ತೆ.. ರಾಕ್ಷಸನ ಅಂತ್ಯ ಹೇಗಾಯ್ತು?