ವಿಜಯಪುರ : ಕಾರು ಮತ್ತು ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.
ಕೆಎ-28 D 1021 ನಂಬರ್ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ವಿಜಯಪುರ ಮೂಲದ್ದು ಎಂದು ತಿಳಿದುಬಂದಿದೆ. ಮೃತರಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ಮೃತರ ಹೆಸರು ಇನ್ನೂ ತಿಳಿದುಬಂದಿಲ್ಲ.
ಕಾರು ವಿಜಯಪುರದಿಂದ ಜಮಖಂಡಿಗೆ ಹೊರಟಿತ್ತು. ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಟ್ರಕ್ ಬರುತ್ತಿತ್ತು. ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಬಿಸಿಲಿನ ತಾಪದ ಎಫೆಕ್ಟ್ : ರಾಜ್ಯದಲ್ಲಿ ಬಿಯರ್ ಭರ್ಜರಿ ಸೇಲ್ – 11 ದಿನದಲ್ಲಿ 17.67 ಲಕ್ಷ ಲೀ. ಮಾರಟ..!
Post Views: 146