ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಗುರುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಫ್ಲೈ ಓವರ್ ಮೇಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರೊಂದು ಅತಿವೇಗವಾಗಿ ಬಂದ ಪರಿಣಾಮ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆ ಕಾರು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಟ್ಟು ಮೂರು ಕಾರುಗಳು ಹಾಗೂ ಬೈಕ್ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸರಣಿ ಅಪಘಾತದಿಂದಾಗಿ ಫ್ಲೈಓವರ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಲ್ಲೇ ನಿಂತು ವಾಹನ ಸವಾರರು ಪರದಾಡುವಂತಾಗಿತ್ತು. ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಎಲಿವೇಟೆಡ್ ಫ್ಲೈವರ್ ಸಿಬ್ಬಂದಿ ಆಗಮಿಸಿ ಅಪಘಾತವಾಗಿದ್ದ ವಾಹನಗಳನ್ನು ತೆರವು ಮಾಡಲು ಹರಸಾಹಸಪಟ್ಟಿದ್ದಾರೆ. ಇನ್ನು ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಇಂದಿನಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ.. ಭಾರತ-ಆಸ್ಟ್ರೇಲಿಯಾ ನಡುವಣ ಮಹಾಕದನಕ್ಕೆ ‘ಪರ್ತ್’ ಸಜ್ಜು..!