ಬೆಳಗಾವಿ : ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಕಾರಿನ ಮದ್ಯ ಭೀಕರ ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಾರು ಗುದ್ದಿದ್ದ ರಭಸಕ್ಕೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಕಾರು ಅಥಣಿಯಿಂದ ವಿಜಯಪುರ ಮಾರ್ಗವಾಗಿ ಸಾಗುತ್ತಿತ್ತು. ನಿನ್ನೆ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ಗಾಯಾಳುಗಳನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ನಕ್ಸಲ್ ನಾಯಕ ವಿಕ್ರಂ ಎನ್ಕೌಂಟರ್ – ಕಾರ್ಯಾಚರಣೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
Post Views: 71