Download Our App

Follow us

Home » ಅಪರಾಧ » ದರ್ಶನ್‌ಗೆ ಜೈಲೇ ಗತಿ – ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ದರ್ಶನ್‌ಗೆ ಜೈಲೇ ಗತಿ – ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್​ಗೆ ಕೋರ್ಟ್ ಮತ್ತೆ ಶಾಕ್ ನೀಡಿದೆ. ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ನಟ ದರ್ಶನ್​ಗೆ ಮತ್ತೆ 14 ದಿನ ಜೈಲೇ ಗತಿ ಆಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಇತರ ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.

ಇಬ್ಬರು ವಕೀಲ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆಗಸ್ಟ್ 14ರ ವರೆಗೂ ದರ್ಶನ್ ಆ್ಯಂಡ್ ಗ್ಯಾಂಗ್​ಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್​ಗೆ ಕೋರ್ಟ್ ಶಾಕ್ ನೀಡಿದೆ.

ಇದನ್ನೂ ಓದಿ : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 3ನೇ ಪದಕ – 50 ಮೀಟರ್​​​​​ ರೈಫಲ್​​ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸ್ವಪ್ನಿಲ್..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here