ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಒಂದು ಕೈಯಲ್ಲಿ ಟೀ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದಿದ್ದ ಫೋಟೋ ಇಡೀ ರಾಜ್ಯಾದ್ಯಂತ ಸದ್ದು ಮಾಡಿದೆ. ಈ ಸಂಬಂಧ ದರ್ಶನ್ ವಿರುದ್ಧ FIR ದಾಖಲಾದ ಬೆನ್ನಲ್ಲೇ ಕೋರ್ಟ್ ಕೂಡ ಮಹತ್ವದ ಆದೇಶ ನೀಡಿದೆ.
ನಟ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು 24ನೇ ACMM ಕೋರ್ಟ್ ಆದೇಶ ನೀಡಿದೆ. ಹಾಗಾಗಿ ಇಂದು ಅಥವಾ ನಾಳೆ ದರ್ಶನ್ನ ಬಳ್ಳಾರಿಗೆ ಶಿಫ್ಟ್ ಮಾಡಲಿದ್ದಾರೆ. ಜೈಲಿನಲ್ಲಿ ಬಿಂದಾಸ್ ಆಗಿದ್ದ ದರ್ಶನ್ ಫೋಟೋ ವೈರಲ್ ಆಗುತ್ತಿದ್ದಂತೆ ಬಂಧಿಖಾನೆ ಅಧಿಕಾರಿಗಳು ತೀವ್ರ ಟೀಕೆಗೆ ಗುರಿಯಾಗಿದ್ದರು. ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಗೃಹ ಇಲಾಖೆ, ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ದರ್ಶನ್ ಅವರು ಈಗ ವಿಚಾರಣಾಧೀನ ಕೈದಿಯಾಗಿದ್ದಾರೆ. ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್ ಆದ ಬಳಿಕ ಅವರ ವಿರುದ್ಧ ಕೇಸ್ ದಾಖಲಾಯ್ತು. ಆದರೆ ಆರೋಪಿಯ ವಿಚಾರಣೆಗೆ ಕೋರ್ಟ್ ಅನುಮತಿಯ ಅಗತ್ಯವಿತ್ತು. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದ ಸರ್ಕಾರಕ್ಕೆ ಇದೀಗ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇದನ್ನೂ ಓದಿ : ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪೊಲೀಸ್ ಪೇದೆ – ಮನನೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ..!