Download Our App

Follow us

Home » ಸಿನಿಮಾ » ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಕ..!

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಕ..!

ಬೆಂಗಳೂರು : 15ನೇ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಕರಾಗಿದ್ದಾರೆ. ಇಂದಿನಿಂದ ಮಾರ್ಚ್ 7ರವರೆಗೂ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಲುಗಳ ಮುಂಭಾಗದಲ್ಲಿ ಸಮಾರಂಭ ಆಯೋಜನೆ ಮಾಡಲಾಗಿದೆ.

ಇಂದು ಸಂಜೆ 5 ಗಂಟೆಗೆ ಉತ್ಸವಕ್ಕೆ ಅದ್ದೂರಿ ಚಾಲನೆ ಸಿಗಲಿದೆ. ಮಾರ್ಚ್ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭ ಜರುಗಲಿದೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್ ಆಗಿದ್ದಾರೆ. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.

ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ. ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಮಾರ್ಚ್ 1 ರಿಂದ ಮಾರ್ಚ್ 7ರ ವರೆಗೆ ಸಿನಿಮಾಗಳ ಪ್ರದರ್ಶನ ನಡೆಯಲಿದೆ.

Leave a Comment

DG Ad

RELATED LATEST NEWS

Top Headlines

ಚಿತ್ರದುರ್ಗದಲ್ಲಿ ಖಾಸಗಿ ಬಸ್ಸನ್ನೇ ಕದ್ದು ಎಸ್ಕೇಪ್ ಆಗಿರೋ ಖತರ್ನಾಕ್ ಕಳ್ಳರು..!

ಚಿತ್ರದುರ್ಗ : ಖಾಸಗಿ ಬಸ್​​ವೊಂದನ್ನು ಕದ್ದು ಕಳ್ಳರು ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಯಕನಹಟ್ಟಿ ಮೂಲದ SRE ಬಸ್ ಮಾಲೀಕ ಸಯ್ಯದ್

Live Cricket

Add Your Heading Text Here