ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಇತ್ತೀಚೆಗಷ್ಟೇ ತಾವು ವರಿಸುವ ವಧುವಿನ ಫೋಟೋ ಜೊತೆಗೆ ಮಾಹಿತಿ ಹಂಚಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಎರಡು ಕಡೆಯ ಕುಟುಂಬಸ್ಥರ ಸಮ್ಮುಖದಲ್ಲಿ ಲಗ್ನಪತ್ರಿಕೆ ಬರೆಸುವ ಶಾಸ್ತ್ರ ಹಾಗೂ ನಿಶ್ಚಿತಾರ್ಥ ಸಂಭ್ರಮ ಮಾಡಿಕೊಂಡಿದ್ದಾರೆ.
ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ವೈದ್ಯೆ ಧನ್ಯತಾ ಅವರ ಜೊತೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ 2025ರ ಫೆಬ್ರವರಿ 16 ರಂದು ಧನಂಜಯ್ ಹಾಗೂ ಧನ್ಯತಾ ಅವರು ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಧನಂಜಯ್ ಅವರ ಮದುವೆ ಸುದ್ದಿಯಿಂದ ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು. ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ.
ಇದನ್ನೂ ಓದಿ : ಹನ್ನೊಂದು ಲಕ್ಷ BPL ಕಾರ್ಡ್ APL ಕಾರ್ಡ್ ಆಗಿ ಬದಲಾಗ್ತವೆ – ಹೆಚ್ಡಿಕೆ ಬಿಗ್ ಬಾಂಬ್..!