ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ನಟ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ನೀಡಿದ್ದಾರೆ. ಜನವರಿ 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾಗುವಂತೆ ರಾಮ ಜನ್ಮಭೂಮಿ ಟ್ರಸ್ಟ್ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ನೀಡಿದೆ.
ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರೂ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ದಕ್ಷಿಣದ ಕೆಲವೇ ಕೆಲವು ನಟರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದೆ.
ಇದೀಗ ನಟ ನಿಖಿಲ್ ಕುಮಾರ್ ಅವರಿಗೂ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಸಿಕ್ಕಿದೆ. ಜನವರಿ 22ರಂದು ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.
ಹಾಗಾಗಿ ಈ ಸಲದ ಹುಟ್ಟುಹಬ್ಬ ಮತ್ತಷ್ಟು ವಿಶೇಷವಾಗಲಿದ್ದು, ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಳ್ಳಲಿದ್ದಾರೆ.
ಇದನ್ನೂ ಓದಿ : ಖಾಸಗಿ ಬ್ಯಾಂಕ್ನಿಂದ ಕಿರುಕುಳ ಆರೋಪ : ವಿಧಾನಸೌಧ ಮುಂಭಾಗ ಆತ್ಮಹ*ತ್ಯೆಗೆ ಯತ್ನಿಸಿದ ದಂಪತಿ..!