Download Our App

Follow us

Home » Uncategorized » ನಟ ಹಾಗೂ ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು..!

ನಟ ಹಾಗೂ ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು..!

ಬೆಂಗಳೂರು : ಹೃದಯಾಘಾತದಿಂದ ಮಾಜಿ ಐಎಎಸ್ ಅಧಿಕಾರಿ, ಹಿರಿಯ ನಟ ಕೆ ಶಿವರಾಮ್ ಅವರು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 20 ದಿನಗಳಿಂದ ಶಿವರಾಮ್‌ ಅವರ ಆರೋಗ್ಯದಲ್ಲಿ ಏರಪೇರಾಗಿತ್ತು. ಇದೀಗ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಶಿವರಾಮ್ ಅವರು ಸಧ್ಯ ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಅವರ ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಲಾಗಿದೆ.

ಕೆ.ಶಿವರಾಮ್ ಅವರು ಕನ್ನಡದಲ್ಲಿ ಪ್ರಥಮ ಬಾರಿ ಐಎಎಸ್ ಪರೀಕ್ಷೆ ಬರೆದು ಪಾಸಾದ ಮೊದಲ ವ್ಯಕ್ತಿಯಾಗಿದ್ದು, ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೆ ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದ್ದು, ಇಂದು ಅವರಿಗೆ ಹೃದಯಾಘಾತವಾಗಿದೆ. ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧು ಚಂದ್ರಕೆ’, ‘ವಸಂತಕಾವ್ಯ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ನಾಗ’ ‘ಓ ಪ್ರೇಮ ದೇವತೆ’, 2007ರಲ್ಲಿ ಬಿಡುಗಡೆ ಆದ ‘ಟೈಗರ್’ ಸಿನಿಮಾಗಳಲ್ಲಿ ನಟಿಸಿದ್ದಾರೆ.

2007 ರ ಬಳಿಕ ಶಿವರಾಮ್ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಿರಲಿಲ್ಲ. ಕೆ ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ನಿವೃತ್ತರಾದ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕೆ ಶಿವರಾಮ್, 2013 ರಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, 2016ರ ಬಳಿಕ ಬಿಜೆಪಿ ಪಕ್ಷ ಸೇರಿದ್ದರು. ಇದಲ್ಲದೆ, ಛಲವಾದಿ ಮಹಾಸಭಾದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ : ರಾಜ್ಯದ ಜನತೆಗೆ ಕರೆಂಟ್ ಶಾಕ್ – ಇಂದು ಸಂಜೆ KERCಯಿಂದ ವಿದ್ಯುತ್ ದರ ಪರಿಷ್ಕರಣೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here