ಗದಗ : ವಿದ್ಯುತ್ ಶಾಕ್ಗೆ ಬಲಿಯಾಗಿದ್ದ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ನೆರವಿನ ಚೆಕ್ ವಿತರಣೆ ಮಾಡಿದ್ದಾರೆ.
ಇಂದು ಯಶ್ ಸ್ನೇಹಿತರಾದ ಚೇತನ, ರಾಕೇಶ್‌ರಿಂದ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ. ಗದಗದ ಸೂರಣಗಿಯ ನವೀನ, ಮುರಳಿ, ಹನುಮಂತ ಕಟೌಟ್ ಹಾಕುವ ವೇಳೆ ಕರೆಂಟ್ ತಗುಲಿ ಸಾವನ್ನಪ್ಪಿದ್ದರು.
ಖುದ್ದು ನಟ ಯಶ್ ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಗಾಯಾಳುಗಳ ದಾಖಲೆಯನ್ನೂ ಸಂಗ್ರಹಿಸಿ ಸೂಕ್ತ ಪರಿಹಾರವನ್ನು ನೀಡುವುದಾಗಿ ಹೇಳಿದ್ದರು.
ಪ್ರತಿ ವರ್ಷ ಯಶ್ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಈ ಬಾರಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾಗ ದುರ್ಘಟನೆ ನಡೆಯಿತು.
ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿದ್ದರಿಂದ ಮುರಳಿ, ನವೀನ್ ಮತ್ತು ಹನುಮಂತ ಮೃತರಾದರು. ಅಭಿಮಾನಿಗಳ ಸಾವಿನ ಸುದ್ದಿ ತಿಳಿದು ಯಶ್ ಅವರು ಕಂಬನಿ ಮಿಡಿದರು. ಮರುದಿನ ಅವರು ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಮೃತರ ಮನೆಗಳಿಗೆ ತೆರಳಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು.
ಈ ವೇಳೆ ಅವರಿಗೆ ಪರಿಹಾರ ಹಣದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್ ತಿಳಿಸಿದ್ದರು. ಈಗ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡಿರುವುದು ತಿಳಿದುಬಂದಿದೆ.
ಇದನ್ನೂ ಓದಿ : ಪೀಣ್ಯ ಫ್ಲೈಓವರ್ ಮೇಲೆ 30 ಟನ್ ತೂಕದ ಟ್ರಕ್ ಗಳನ್ನ ನಿಲ್ಲಿಸಿ ಲೋಡ್ ಟೆಸ್ಟಿಂಗ್..