ಬೆಂಗಳೂರು : ದರ್ಶನ್ ಅರೆಸ್ಟ್ ವಿಚಾರಕ್ಕೆ ನಟಿ ರಚಿತಾ ರಾಮ್ ಮೌನ ಮುರಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಡಿಂಪಲ್ ಕ್ವೀನ್ ಬರೆದುಕೊಂಡಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಡಿಪ್ಲೋಮ್ಯಾಟಿಕ್ ಆಗಿ ಪೋಸ್ಟ್ ಹಾಕಿದ್ದಾರೆ. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ, ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದಲ್ಲಿ ತಪ್ಪುಗಳನ್ನ ತಿದ್ದಿ ಮಾರ್ಗದರ್ಶನ ನೀಡಿದವರು ದರ್ಶನ್ ಸರ್. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ. ಪೊಲೀಸರ ತನಿಖೆಯಲ್ಲಿ ಸತ್ಯ ಹೊರಬರಲಿದೆ ಎಂದು ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ನನ್ನ ಹಣೆಗೂ ನಟ ದರ್ಶನ್ ಗನ್ ಇಟ್ಟಿದ್ದ – ಬಿಗ್ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಗೌಡ..!