ಮಂಗಳೂರು : ಇಂದು ಮಂಗಳೂರು ಗಾಂಧಿನಗರದ ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವ, ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಹಾಗೂ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು, ಚಿತ್ರದುರ್ಗ ಕಬೀರಾನಂದ ಆಶ್ರಮದ ಪೂಜ್ಯ ಶ್ರೀ ಶ್ರೀ ಶಿವಲಿಂಗಾನಂದ ಸ್ವಾಮೀಜಿಯವರು, ಶ್ರೀ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹುಕ್ಕೇರಿ ಹಿರೇಮಠ, ಬೆಳಗಾವಿ, ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಸೇರಿದಂತೆ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳು ಸೇರಿ ಸಾಧು ಸಂತರು ಭಾಗಿಯಾಗಿದ್ದರು.
ಇನ್ನು, ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣ ಸಚಿವರಾದ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ ಸದಾನಂದ ಗೌಡ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ವೈ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಗಂಗಾಧರ್ ಗೌಡ, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಮನೋಜ್ ಕುಮಾರ್ ಕೋಡಿಕಲ್, ಹೊಸ ದಿಗಂತ ಪತ್ರಿಕೆಯ ಸಿಇಒ ಪ್ರಕಾಶ್ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರು ಕೂಡ ಉಪಸ್ಥಿತರಿದ್ದರು.
ಇದನ್ನೂ ಓದಿ : ಕೃಷ್ಣಂ ಪ್ರಣಯ ಸಖಿ ಸಕ್ಸಸ್ ಬಳಿಕ “ಗಣಿ” ಹೊಸ ಸಿನಿಮಾ – ಕ್ಷುದ್ರ, ರುದ್ರನ ಅವತಾರದಲ್ಲಿ ಗೋಲ್ಡನ್ ಸ್ಟಾರ್..!