ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ.
ತೀರ್ಪಿನ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಆದೇಶದಲ್ಲಿ 17Aಗೆ ಸೀಮಿತವಾಗಿ ಆದೇಶ ಬಂದಿದೆ. ಸೆಕ್ಷನ್ 218ರ ಅಡಿ ನೀಡಿದ ಅಭಿಯೋಜನೆ ತರಿಸ್ಕರಿಸಿದೆ. ರಾಜ್ಯಪಾಲರು ನೀಡಿದ ಅಭಿಯೋಜನೆ ತಿರಸ್ಕೃತವಾಗಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ತನಿಖೆಗೆ ಅವಕಾಶ ಇದೆಯೋ ಇಲ್ಲವೋ? ಈ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚಿಸುತ್ತೇನೆ ಎಂದಿದ್ದಾರೆ.
ದೂರುದಾರರು ಸೆಕ್ಷನ್ 218 BNS, 17A, 19 ಪಿಸಿ ಅಡಿ ತನಿಖೆಗೆ ಕೇಳಿದ್ರು. ಮುಂದಿನ ದಿನಗಳಲ್ಲಿ 17 ಎ ಅಡಿ ನೀಡಿರುವ ತನಿಖೆಯೂ ರದ್ದಾಗಲಿದೆ. ರಾಜಕೀಯ ಹೋರಾಟದಲ್ಲಿ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ-ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ತಿಳಿಸಿದರು.
ಇದು ಮೋದಿ ಸರ್ಕಾರದ ಸೇಡಿನ ರಾಜಕೀಯದ ಕ್ರಮ. ಸೇಡಿನ ರಾಜಕೀಯದ ವಿರುದ್ದ ನಾವು ಹೋರಾಟ ಮಾಡ್ತೇವೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ನನ್ನ ಜೊತೆಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದೆ. ನಾನು ಬಡವರು, ಸಾಮಾಜಿಕ ನ್ಯಾಯದ ಪರ ಇದ್ದೇನೆ ಎಂದಿದ್ದಾರೆ.
ಇನ್ನು ಸೇಡಿನ ರಾಜಕಾರಣಕ್ಕೆ ಮುಡಾ ಪ್ರಕರಣ ಒಂದು ನೆಪ ಅಷ್ಟೇ. ನಮ್ಮ ಸರ್ಕಾರದ ಯೋಜನೆ ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡುತ್ತಿದೆ. ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಪಿತೂರಿ ಮಾಡಿದ್ದಾರೆ. ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದ್ದು, ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದು ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು – ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾದ ಕಮಲ ನಾಯಕರು..!