ಬೆಂಗಳೂರು : ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಅಂತ ಹೇಳಿಕೊಂಡು ವಾರಾಹಿ ಜ್ಯುವೆಲ್ಲರಿಯಲ್ಲಿ 14 ಕೋಟಿ ಮೌಲ್ಯದ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ನಿನ್ನೆ ಚಂದ್ರಲೇಔಟ್ ಪೊಲೀಸರು ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್ ಇಬ್ಬರನ್ನೂ ಬಂಧಿಸಿ, ಕೋರ್ಟ್ಗೆ ಹಾಜರು ಪಡಿಸಿದ್ದರು. ವಿಚಾರಣೆ ಬಳಿಕ ಕೋರ್ಟ್ ಐಶ್ವರ್ಯ ಗೌಡ, ಪತಿ ಹರೀಶ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಏನಿದು ಪ್ರಕರಣ?
ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪ ಕೂಡ ಕೇಳಿಬಂದಿದೆ.
ಧಮೇಂದ್ರ ಡಿ.ಕೆ ಸುರೇಶ್ ವಾಯ್ಸ್‌ನಲ್ಲಿ ಕರೆ ಮಾಡಿದ್ದ ಧರ್ಮೇಂದ್ರ ಮಾಲೀಕರಾದ ವನಿತಾ ಐತಾಳ್‌ಗೆ ಕರೆ ಮಾಡಿ ಸಮಯ ಕೇಳಿದ್ದರು. ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ವನಿತಾ ಐತಾಳ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ನಿನ್ನೆ ಆರೋಪಿಗಳಿಬ್ಬರನ್ನ ಬಂಧಿಸಿದ್ದಾರೆ. ಅಲ್ಲದೇ ನಟ ಧಮೇಂದ್ರ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ : ಭೀಕರ ವಿಮಾನ ದುರಂತ – 181 ಜನರಿದ್ದ ವಿಮಾನ ಪತನಗೊಂಡು 23 ಮಂದಿ ಸಾವು..!