Download Our App

Follow us

Home » ಸಿನಿಮಾ » ರಾಧಿಕಾ ಕುಮಾರಸ್ವಾಮಿ ನಟನೆಯ ʼಅಜಾಗ್ರತʼ ಸಿನಿಮಾ ಡೈರೆಕ್ಟರ್‌ಗೆ ದುಬಾರಿ ಕಾರ್‌ ಗಿಫ್ಟ್‌ ನೀಡಿದ ನಿರ್ಮಾಪಕ..!

ರಾಧಿಕಾ ಕುಮಾರಸ್ವಾಮಿ ನಟನೆಯ ʼಅಜಾಗ್ರತʼ ಸಿನಿಮಾ ಡೈರೆಕ್ಟರ್‌ಗೆ ದುಬಾರಿ ಕಾರ್‌ ಗಿಫ್ಟ್‌ ನೀಡಿದ ನಿರ್ಮಾಪಕ..!

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್​​​ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ : ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಮರ್ಡರ್‌ ಕೇಸ್‌ ಎಪಿಸೋಡ್‌? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here