ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ತಂದೆಯಾಗುತ್ತಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ಮೇಹಾ ಪಟೇಲ್ ಜೊತೆಗಿನ ವಿಡಿಯೋ ಹಂಚಿಕೊಳ್ಳುವ ಮೂಲಕ ಸಿಹಿ ಸುದ್ದಿಯನ್ನು ಹೇಳಿಕೊಂಡಿದ್ದಾರೆ.
ಅಕ್ಷರ್ ಪಟೇಲ್ ಮನೆಗೆ ಹೊಸ ಆಗಮನದ ನಿರೀಕ್ಷೆಯಲ್ಲಿದೆ. ಅದಕ್ಕೂ ಮೊದಲು ಅಕ್ಷರ್ ಪಟೇಲ್ ಕುಟುಂಬದ ಜೊತೆ ಸೇರಿಕೊಂಡು ತನ್ನ ಪತ್ನಿ ಮೇಹಾಗೆ ಸೀಮಂತ ಮಾಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದೀಗ ಮೇಹಾ ಗರ್ಭಿಣಿಯಾಗಿದ್ದು, ಅಕ್ಷರ್ ಮುದ್ದಾದ ಮಗುವಿನ ಆಗಮನಕ್ಕೆ ಕಾಯುತ್ತಿದ್ದಾರೆ. ಅಭಿಮಾನಿಗಳು ಸಹ ಕ್ರಿಕೆಟಿಗ ಹಂಚಿಕೊಂಡ ವಿಡಿಯೋ ಕಂಡು ಸಂತಸಗೊಂಡಿದ್ದಾರೆ. ಅಷ್ಟೇ ಅಲ್ಲದೆ ಕಾಮೆಂಟ್ ಬರೆಯುವ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.
ಇದನ್ನೂ ಓದಿ : ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ..!
Post Views: 61