ಬೆಂಗಳೂರು : ಚುನಾವಣಾ ಬಾಂಡ್ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವರ ವಿರುದ್ಧ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ದೂರುದಾರ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ನ ಆದರ್ಶ ಅಯ್ಯರ್ ಎಂಬವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಎಫ್ಐಆರ್ ದಾಖಲಿಸುವಂತೆ ತಿಲಕ್ ನಗರ ಪೊಲೀಸರಿಗೆ ಶುಕ್ರವಾರ ಸೂಚನೆ ನೀಡಿತ್ತು.
ಇದೀಗ ಆದರ್ಶ ಅಯ್ಯರ್ ಸಲ್ಲಿಸಿದ್ದ ಖಾಸಗಿ ದೂರು ಸಂಬಂಧ ಐಪಿಸಿ 384,120b,34 ಸೆಕ್ಷನ್ ಅಡಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.
ಇದನ್ನೂ ಓದಿ : ಇಸ್ರೇಲ್ ಸೇನೆ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಸಾವು..!
Post Views: 222