Download Our App

Follow us

Home » ಅಪರಾಧ » ಶಾಸಕರಿಗೆ ಆಮಿಷ ಆರೋಪ : ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR..!

ಶಾಸಕರಿಗೆ ಆಮಿಷ ಆರೋಪ : ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR..!

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ರಾಜ್ಯಸಭಾ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿ ನಾಲ್ವರ ವಿರುದ್ಧ FIR ದಾಖಲಾಗಿದೆ.

ಶಾಸಕ ರವಿಕುಮಾರ್ ಗೌಡ ಕೊಟ್ಟ ದೂರಿನ ಮೇಲೆ FIR ದಾಖಲಾಗಿದ್ದು, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ, ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಡಾ.ಮಹಾಂತೇಶ್, ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ FIR ದಾಖಲಾಗಿದೆ. IPC ಸೆಕ್ಷನ್ 171E, 506,171ರಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶಾಸಕ ರವಿಕುಮಾರ್ ಗೌಡ ಪೊಲೀಸ್ ಕಮಿಷನರ್​​ಗೆ ದೂರು ನೀಡಿದ್ದು, ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರಿಗೆ ಆಮಿಷವೊಡ್ಡಿದ ಆರೋಪ ಕೇಳಿಬಂದಿದೆ. ಹರಪನಹಳ್ಳಿ ಪಕ್ಷೇತರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿ ಹಲವರಿಗೆ ಆಮಿಷವೊಡ್ಡಿದ್ದಾರೆ. ಅಡ್ಡ ಮತದಾನ ಮಾಡಲು ಹಣದ ಆಮಿಷವೊಡ್ಡಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ರವಿಕುಮಾರ್ ಗೌಡ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ.

ಇದನ್ನೂ ಓದಿ :  ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ವಿಜಯೇಂದ್ರ ಗ್ರೀನ್ ಸಿಗ್ನಲ್..!

Leave a Comment

DG Ad

RELATED LATEST NEWS

Top Headlines

ಮಂಡ್ಯದಲ್ಲಿ ಒಂಟಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಓರ್ವ ದುಷ್ಕರ್ಮಿ ಪೊಲೀಸರ ವಶಕ್ಕೆ..!

ಮಂಡ್ಯ : ಒಂಟಿ ಮನೆಗೆ ನುಗ್ಗಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಜಯಂತಿ ನಗರದ ಸಿಪಿಎಡ್ ಕಾಲೇಜ್ ಬಳಿ ನಡೆದಿದೆ. ಚಡ್ಡಿಗ್ಯಾಂಗ್

Live Cricket

Add Your Heading Text Here